8:40 PM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ

17/09/2024, 17:49

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮುಸ್ಲಿಂ ಧರ್ಮಿಯರ ಪವಿತ್ರ ಹಬ್ಬವಾದ ಈದ್ ಮಿಲಾದ್ ಹಬ್ಬವನ್ನು ಸೋಮವಾರ ವಿಜೃಂಭಣೆಯಿಂದ ಸಡಗರ ಹಾಗೂ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.


ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಪರಸ್ಪರ ಸರ್ವಧರ್ಮ ಸಮನ್ವಯತೆಯೊಂದಿಗೆ ಸರ್ವರ ಸಹಕಾರದಲ್ಲಿ ಈದ್ ಮಿಲಾದ್ ಹಬ್ಬವನ್ನು ಸಿಹಿ ಹಂಚಿ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಲೋಕಾನುಗ್ರಹಿ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ) ರ ಜನ್ಮ ದಿನಾಚರಣೆಯ ಪ್ರಯುಕ್ತ ವರ್ಷಂಪ್ರತಿ ನಡೆಸುವಂತೆ ಈ ಬಾರಿಯೂ ಪವಿತ್ರ ರಬೀವುಲ್ ಅವ್ವಲ್ ತಿಂಗಳಲ್ಲಿ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ (SSF) ಇಂದಿರಾನಗರ ಮತ್ತು ತೀರ್ಥಹಳ್ಳಿ ಶಾಖೆಯ ಕಾರ್ಯಕರ್ತರು “ಬೃಹತ್ ಬುರ್ದಾ ಮಜ್ಲಿಸ್” ಕಾರ್ಯಕ್ರಮವನ್ನು ಬಹುಮಾನ್ಯರಾದ ಅಸ್ಸಯ್ಯದ್ ಅಬೂಬಕರ್ ಸಿದ್ದೀಕ್ ತಂಙಳ್ ಅಲ್ ಹಾದಿ ಅವರ ನೇತೃತ್ವದಲ್ಲಿ ಸಾಗರ ರಸ್ತೆಯಲ್ಲಿರುವ ಜಲಾಲಿಯಾ ಸುನ್ನೀ ಜಾಮಿಯ ಮಸೀದಿಯಲ್ಲಿ. ಮುಹಿಯದ್ದೀನ್ ಜುಮಾ ಮಸೀದಿ ಇಂದಿರಾನಗರ ಇದರ ಆಶ್ರಯದಲ್ಲಿ, ಆಯೋಜಿಸಿದ್ದರು.
ಈ ಕಾರ್ಯಕ್ರಮದ ಅಧ್ಯಕ್ಷರಾದ ಸುಲೈಮಾನ್ ಹಾಜಿ, ಹಂಝ ಇಂದಿರಾನಗರ ಸಹಿತ ಸರ್ವ ಸಮಿತಿಯ ಸದಸ್ಯರು ಹಾಗೂ ನ್ಯಾಷನಲ್ ಸಮೂಹ ಸಂಸ್ಥೆಯ ಡಿ .ಎಸ್ ಅಬ್ದುಲ್ ರೆಹಮಾನ್, ಸುನ್ನೀ ಯುವಜನ ಸಂಘದ (SYS) ನಾಯಕರಾದ ಶಾಹುಲ್ ಹಮೀದ್ ಉಸ್ತಾದ್, ಜಮಾತಿನ ಉಸ್ತಾದರುಗಳು ,
ಹಾಗೂ ಮುಸ್ಲಿಂ ಮುಖಂಡರು, ಮುಸ್ಲಿಂ ಧರ್ಮ ಬಾಂಧವರು ಮೊದಲಾದವರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮ ಮಂಗಳೂರಿನ ಪ್ರತಿಷ್ಠಿತ ಬುಖಾರಿಯ್ಯಾ ಬುರ್ದಾ ತಂಡದವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು