10:00 AM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ…

ಇತ್ತೀಚಿನ ಸುದ್ದಿ

ತಿರುಮಲ ಶ್ರೀ ಲಕ್ಷ್ಮಿವೆಂಕಟರಮಣ ದೇವಸ್ಥಾನದಲ್ಲಿ ಅನಂತ ಚತುರ್ದಶಿ ಪ್ರಯುಕ್ತ ವಿಶೇಷ ಪೂಜೆ

17/09/2024, 19:24

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ಪಟ್ಟಣದ ರಥಬೀದಿ ರಸ್ತೆಯಲ್ಲಿರುವ ತಿರುಮಲ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದಲ್ಲಿ ಅನಂತ ಚತುರ್ದಶಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮ ಜರುಗಿತು.
ಬೆಳಗ್ಗೆಯಿಂದಲೇ ತಿರುಪತಿ ತಿರುಮಲೇಶ, ತೀರ್ಥ ರಾಜಾಪುರಾಧೀಶ ಶ್ರೀ ಲಕ್ಷ್ಮೀ ವೆಂಕಟರಮಣ ದೇವರು ಭೂ ವೈಕುಂಠ ತಿರುಪತಿಯಿಂದ ತೀರ್ಥಹಳ್ಳಿಗೆ ಆಗಮಿಸಿದ ಪರ್ವ ಕಾಲ ದಿನವಾದ ಅನಂತ ಚತುರ್ದಶಿಯಂದು ದೇವರಿಗೆ ಗಂಗಾ ಪೂಜೆ, ಕಲಶಸ್ಥಾಪನೆ, ವಿಶೇಷ ಪವಮಾನ ಅಭಿಷೇಕ, ಅನಂತ ವ್ರತಾಚರಣೆ, ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಮಹಾಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿ ವಿವಿಧ ಪೂಜಾ ಕಾರ್ಯಕ್ರಮಗಳು ಜರುಗಿತು.
ಈ ಸಂದರ್ಭದಲ್ಲಿ ಸಮಾಜದ ಮಹಿಳಾ ಬಾಂಧವರಿಂದ ಸಾಮೂಹಿಕ ಭಜನಾ ಕಾರ್ಯಕ್ರಮವು ನಡೆಯಿತು. ಇಂದು ಸಂಜೆ ದೀಪ ನಮಸ್ಕಾರ, ಭಜನೆ, ರಂಗಪೂಜೆ, ಸರ್ವಸೇವೆ ಜರುಗಿತು.
ಕಾರ್ಯಕ್ರಮದಲ್ಲಿ ತಿರುಮಲ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಸಮಾಜದ ಪದಾಧಿಕಾರಿಗಳು, ಸದಸ್ಯರು ಹಾಗೂ ಪಟ್ಟಣದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು