10:30 PM Sunday18 - January 2026
ಬ್ರೇಕಿಂಗ್ ನ್ಯೂಸ್
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ…

ಇತ್ತೀಚಿನ ಸುದ್ದಿ

ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ: ಆರ್ಥಿಕವಾಗಿ ಸಬಲರಾಗಲು ಶಾಸಕ ಡಾ. ಭರತ್ ಶೆಟ್ಟಿ ಕರೆ

17/09/2024, 19:38

ಸುರತ್ಕಲ್ (reporterkarnataka.com): ವಿಶ್ವಕರ್ಮ ಜಯಂತಿಯ ಪ್ರಯುಕ್ತ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಸುರತ್ಕಲ್, ಪಣಂಬೂರು ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಕೃಷ್ಣಾಪುರ, ವಿಶ್ವ ಬ್ರಹ್ಮಾಣ ಸಂಘ ಕೈಕಂಬ ಕಿನ್ನಿ ಕಂಬ್ಲ ವತಿಯಿಂದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಅಮೋಘ ಕಾಣಿಕೆ ನೀಡುತ್ತಿರುವ ವಿಶ್ವಕರ್ಮ ಸಮಾಜದ ಕೊಡುಗೆ ಅಪಾರವಾಗಿದೆ ಎಂದು ಬಣ್ಣಿಸಿದರು.
ನಾಗರಿಕ ಸಮಾಜ ನಿರ್ಮಾಣಕ್ಕೆ ಅವಶ್ಯವಿರುವ ಪಂಚ ಕಸುಬುಗಳೊಂದಿಗೆ ಎಲ್ಲ ಜಾತಿ ಮತ್ತು ವರ್ಗಗಳ ಜನರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದುವ ಮೂಲಕ ತಮ್ಮದೇ ಕೊಡುಗೆ ನೀಡುತ್ತಿರುವ ವಿಶ್ವಕರ್ಮರು ಸಂಘಟಿತರಾಗಬೇಕಿದೆ. ಸಂವಿಧಾನ ಬದ್ಧವಾಗಿ ದೊರೆಯಲೇ ಬೇಕಾಗಿರುವ ಸೌಲಭ್ಯಗಳನ್ನು ಕೇಳಿ ಪಡೆದು ಆರ್ಥಿಕವಾಗಿ ಸಬಲೀಕರಣ ಸಾಧಿಸಿ ಅಭಿವೃದ್ಧಿಯ ಪಥದತ್ತ ಸಾಗಬೇಕು ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು