12:05 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಸ್ವಚ್ಛತೆ ನಮ್ಮ ಸಂಸ್ಕಾರ ಆಗಲಿ: ಬೆಂಗರೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

17/09/2024, 21:12

ಮಂಗಳೂರು(reporterkarnataka.com): ಸ್ವಚ್ಛತೆಯು ಕೇವಲ ತೋರಿಕೆಗೆ ಸೀಮಿತವಾಗದೆ ನಮ್ಮ ಬದುಕಿನಲ್ಲಿ ಸ್ವಭಾವ ಮತ್ತು ಸಂಸ್ಕಾರ ಆದರೆ ಮಾತ್ರ ಸಮಾಜವನ್ನು ಶುಚಿಯಾಗಿಟ್ಟುಕೊಳ್ಳಬಹುದು ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.
ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ತೋಟ ಬೆಂಗರೆಯಲ್ಲಿ ಮಂಗಳವಾರ ನಡೆದ ಬೃಹತ್ ಸ್ವಚ್ಛತಾ ಅಭಿಯಾನ” ಸ್ವಚ್ಛತೆಯೇ ಸೇವೆ -2024″ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ವಚ್ಛತೆಯನ್ನು ಪಾಲಿಸಲು ಅಭಿಯಾನ ನಡೆಸಬೇಕಾಗಿರುವುದು ವಿಷದಕರವಾಗಿದೆ. ಸ್ವಚ್ಛತೆ ನಮ್ಮ ದೈನಂದಿನ ಭಾಗವಾಗಿರಬೇಕೆ ಹೊರತು ಅಭಿಯಾನ ರೂಪದಲ್ಲಿ ನಡೆಸುವಂತದ್ದಲ್ಲ. ವೈಯಕ್ತಿಕವಾಗಿ ಸ್ವಚ್ಛತೆ ಕಾಪಾಡುವ ನಾಗರಿಕರು ಸಮಾಜಮುಖಿಯಾಗಿ ಚಿಂತಿಸದಿರುವುದು ದುರಂತವಾಗಿದೆ ಎಂದು ಸಂಸದರು ಕಳವಳ ವ್ಯಕ್ತಪಡಿಸಿದರು.


ಶಾಲೆಗಳಲ್ಲಿ ಸ್ವಚ್ಛತಾ ಪಾಠವನ್ನು ಕಲಿತು ಹೊರಗಡೆ ಅದನ್ನು ಅನುಸರಿಸುವುದೇ ಮೌಲ್ಯಯುತ ಶಿಕ್ಷಣವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸ್ವಚ್ಛತೆಯನ್ನು ಸಮಗ್ರವಾಗಿ ಅರಿತು ಮುಂದಿನ ದಿನಗಳಲ್ಲಿ ಅನುಸರಿಸುವುದೇ ನಮಗಿರುವ ಆಶಾಕಿರಣವಾಗಿದೆ. ವಿದ್ಯಾರ್ಥಿ ಮತ್ತು ಯುವ ಸಮೂಹ ಮನಸ್ಸು ಮಾಡಿದರೆ ಈ ದೇಶವು ಸ್ವಚ್ಛ ರಾಷ್ಟ್ರವಾಗುವುದರಲ್ಲಿ ಸಂಶಯವಿಲ್ಲ ಎಂದು ಅವರು ಹೇಳಿದರು.
ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ನಡೆಯುವ ಈ ಬೃಹತ್ ಸ್ವಚ್ಛತಾ ಅಭಿಯಾನದಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳು ಪರಿಪೂರ್ಣವಾಗಿ ತೊಡಗಿಸಿಕೊಳ್ಳಬೇಕೆಂದು ಸಂಸದರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ., ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ. ಎಲ್. ಆನಂದ್, ಉಪ ಅರಣ್ಯ ಸಂರಕ್ಷಣಾಧಿಕಾರಿ (ಸಾಮಾಜಿಕ ಅರಣ್ಯ) ರೋಷನ್ ನಾಣಯ್ಯ, ಹಿರಿಯ ಪರಿಸರ ಅಧಿಕಾರಿ ಲಕ್ಷ್ಮಿಕಾಂತ್, ಪಾಲಿಕೆ
ಸುರತ್ಕಲ್ ವಲಯ ಆಯುಕ್ತೆ ವಾಣಿ, ಬೆಂಗರೆ ಮಹಾಜನ ಸಭಾ ಅಧ್ಯಕ್ಷ ಚೇತನ್ ಬೆಂಗ್ರೆ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸ್ವಚ್ಛತಾ ಪ್ರತಿಜ್ಞಾವಿಧಿಯನ್ನು ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಗಿರೀಶ್ ನಂದನ್ ಬೋಧಿಸಿದರು ಹಾಗೂ ಮೂವರು ಸ್ವಚ್ಛತಾ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಜ್ಞಾನೇಶ್ ಸ್ವಾಗತಿಸಿದರು. ನಾಗರಾಜ್ ಬಜಾಲ್ ವಂದಿಸಿದರು. ನಿಸರ್ಗ ಮಂಜುನಾಥ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು