10:33 PM Thursday11 - September 2025
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ…

ಇತ್ತೀಚಿನ ಸುದ್ದಿ

ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ: 5ನೇ ಬಾರಿ ಭಾರತಕ್ಕೆ ಗೆಲುವು; ಚೀನಾವನ್ನು ಸೋಲಿಸಿದ ಇಂಡಿಯಾ

18/09/2024, 13:17

ಮೊಕಿ(reporterkarnataka.com): ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಚೀನಾವನ್ನು 1-0 ಗೋಲಿನಿಂದ ಸೋಲಿಸಿ, 5ನೇ ಬಾರಿಗೆ ಏಷ್ಯನ್ ಚಾಂಪಿಯನ್ಸ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ. ಹರ್ಮನ್​ಪ್ರೀತ್ ಸಿಂಗ್ ನಾಯಕತ್ವದ ಭಾರತ ಹಾಕಿ ತಂಡ ಈ ಮೂಲಕ ದಾಖಲೆ ಬರೆದಿದೆ. ಭಾರತ ಫೈನಲ್ ಸೇರಿದಂತೆ ಸತತ 7 ಪಂದ್ಯಗಳನ್ನು ಗೆದ್ದು ಪ್ರಶಸ್ತಿ ಪಡೆದಿದೆ.

ಪಂದ್ಯದ ಒಂಬತ್ತನೇ ನಿಮಿಷದಲ್ಲಿ ಭಾರತಕ್ಕೆ ಮೊದಲ ಗೋಲು ಗಳಿಸಲು ಅವಕಾಶ ಸಿಕ್ಕಿತು, ಆದರೆ ಚೀನಾದ ರಕ್ಷಣಾತ್ಮಕ ಆಟದಿಂದ ಅದು ಸಾಧ್ಯವಾಗಲಿಲ್ಲ. 10ನೇ ನಿಮಿಷದಲ್ಲಿ ಮೊದಲ ಪೆನಾಲ್ಟಿ ಕಾರ್ನರ್ ಅವಕಾಶ ಸಿಕ್ಕಾಗ ನಾಯಕ ಹರ್ಮನ್‌ಪ್ರೀತ್ ಗೋಲ್​ ಗಳಿಸಲು ವಿಫಲರಾದರು. ಹೀಗಾಗಿ ವಿರಾಮದ ವೇಳೆಗೆ ಸ್ಕೋರ್‌ಲೈನ್ 0-0 ಆಗಿತ್ತು. ಮೂರನೇ ಕ್ವಾರ್ಟರ್‌ನಲ್ಲಿ ಭಾರತ ಆಕ್ರಮಣಕಾರಿ ಆಟವಾಡಿತು. ಆದರೆ, ಗೋಲು ಗಳಿಸಲು ಯಶಸ್ವಿಯಾಗಲಿಲ್ಲ. ಅಂತಿಮವಾಗಿ 51ನೇ ನಿಮಿಷದಲ್ಲಿ ಜುಗ್​ರಾಜ್ ಸಿಂಗ್ ಗೋಲು ಬಾರಿಸಲು ಯಶಸ್ವಿಯಾದರು. ಟೂರ್ನಿಯ ಮೊದಲ ಪಂದ್ಯದಲ್ಲಿ ಇದೇ ಚೀನಾವನ್ನು 3-0 ಗೋಲುಗಳಿಂದ ಭಾರತ ಸೋಲಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು