3:04 PM Sunday16 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ: 300 ಮಂದಿ ಕಾರ್ಮಿಕರಿಗೆ ಕಿಟ್ ವಿತರಿಸಿದ ಆರಗ ಜ್ಞಾನೇಂದ್ರ

18/09/2024, 16:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ತೀರ್ಥಹಳ್ಳಿಯಲ್ಲಿ ಇಂದು 300 ಜನ ಕಾರ್ಮಿಕರಿಗೆ ಕಿಟ್ ಕೊಡುವ ಕೆಲಸ ಆಗಿದೆ. ಕೋವಿಡ್ ಪೂರ್ವದಲ್ಲಿ ಇಲಾಖೆಯಲ್ಲಿ ಸಾವಿರ ಕೋಟಿ ಹಣ ಇತ್ತು, ಹಾಗಾಗಿ ಕಾರ್ಮಿಕ ಇಲಾಖೆಯಲ್ಲಿ ಹಣ ಇದೆ ಅದನ್ನು ಕಾರ್ಮಿಕರಿಗೆ ಕೊಡುವ ಕೆಲಸ ಮಾಡೋಣ ಎಂದು ತಿಳಿಸಿದ್ದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಬುಧವಾರ ಪಟ್ಟಣದ ಲಯನ್ಸ್ ಭವನದಲ್ಲಿ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು ಕಾರ್ಮಿಕರಿಗೆ ಉಪಕರಣ ಕೊಡುವ ಕೆಲಸ ಸರ್ಕಾರದಿಂದ ಆಗುತ್ತಿದೆ. ಮದುವೆ, ಮಕ್ಕಳ ಶಿಕ್ಷಣ, ಅಪಘಾತ ಹೀಗೆ ಸರ್ಕಾರದಿಂದ ಹಣ ಬರುತ್ತಿದೆ ಎಂದಾಗ ಮಕ್ಕಳಿಗೆ ಸ್ಕಾಲರ್ ಶಿಪ್ ಬರುತ್ತಿಲ್ಲ ಎಂದು ಅಲ್ಲೇ ಇದ್ದ ಕಾರ್ಮಿಕರು ತಿಳಿಸಿದರು. ಯಾಕೆ ಎಂದು ಆರಗ ಜ್ಞಾನೇಂದ್ರ ಪ್ರಶ್ನೆ ಮಾಡಿದ್ದಕ್ಕೆ ಅಧಿಕಾರಿಗಳಿಂದ ತೇಪೆ ಹಚ್ಚುವ ಕೆಲಸ ಕೂಡ ನಡೆಯಿತು. ತಕ್ಷಣವೇ 15 ದಿನದೊಳಗೆ ಬಂದಿಲ್ಲ ಎಂದರೆ ನನ್ನ ಗಮನಕ್ಕೆ ತನ್ನಿ ಬೆಂಗಳೂರಿನಲ್ಲಿ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಮಿಕ ಇಲಾಖೆಯಲ್ಲಿ ಏನೇ ಅನ್ಯಾಯ ಆದರೂ ನನ್ನ ಗಮನಕ್ಕೆ ತನ್ನಿ, ಅಥವಾ ಅಧಿಕಾರಿಗಳಿಂದ ತೊಂದರೆ ಆದರೆ ತಿಳಿಸಿ, ಕಾರ್ಮಿಕ ಕಾರ್ಡ್ ರಿನೀವಲ್ ಮಾಡಿಕೊಳ್ಳಬೇಕು ಎಂದರೆ ಪ್ರತಿಯೊಬ್ಬರು ಮಾಡಿಸಿಕೊಳ್ಳಿ. ನಿಮಗೆ ಬರುವ ಸೌಲಭ್ಯ ತಪ್ಪಿ ಹೋಗಬಾರದು ಎಂಬುದು ನನ್ನ ಇಚ್ಛೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು