8:58 PM Sunday5 - October 2025
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ ವಿಶ್ವ ವಿಖ್ಯಾತ ಮೈಸೂರು ದಸರಾ: ಜಂಬೂ ಸವಾರಿಗೆ ಗಜಪಡೆ ಸಜ್ಜು

ಇತ್ತೀಚಿನ ಸುದ್ದಿ

ಕಾವೂರು ದ. ಕ. ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ: 1 ಕೋಟಿ ರೂ.ವೆಚ್ಚದ ನೂತನ ಕಟ್ಟಡಕ್ಕೆ ಶಂಕು ಸ್ಥಾಪನೆ

18/09/2024, 23:05

ಮಂಗಳೂರು(reporterkarnataka.com): ಕಾವೂರು ದ. ಕ. ಜಿಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂದರ್ಭದಲ್ಲಿ ಅಂದಾಜು 1 ಕೋಟಿ ರೂ. ವೆಚ್ಚದಲ್ಲಿ. ನೂತನ ಕಟ್ಟಡದ ಶಂಕು ಸ್ಥಾಪನೆ ಸಮಾರಂಭ ಬುಧವಾರ ನಡೆಯಿತು.
ಮಂಗಳೂರು ನಗರ ಉತ್ತರದ ಶಾಸಕ ಡಾ.ಭರತ್‌ ಶೆಟ್ಟಿ
ವೈ. ಹಾಗೂ ಕಟ್ಟಡದ ದಾನಿ, ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಅಮೀನ್‌ ಅವರು ಶಂಕು ಸ್ಥಾಪನೆ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಶಾಸಕರು ಇಲ್ಲಿನ ಶಾಲೆ ನೂರು ವರ್ಷಗಳನ್ನು ಪೂರೈಸುತ್ತಿದ್ದು ಸಾವಿರ ಸಾವಿರ ಮಂದಿ ವಿದ್ಯಾರ್ಥಿಗಳು ಕಲಿತು ಇಂದು ಸಮಾಜದ ಉನ್ನತ ಸ್ತರದಲ್ಲಿದ್ದಾರೆ. ಇದೀಗ ಶಾಲೆಯನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ಕೇಶವ ಅಮೀನ್‌ ಉತ್ತಮ ಧ್ಯೆಯದೊಂದಿಗೆ ಮುಂದಾಗಿದ್ದು ಶ್ಲಾಘನೀಯ. ಇತರ ಮೂಲಸೌಕರ್ಯ ಸೇರಿದಂತೆ ಸುಸಜ್ಜಿತ ಶಾಲೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗುದು ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳೂರು ಉತ್ತರ ವಲಯ ಇದರ ಜೇಮ್್ಸ ಕುಟಿನೋ
ಮನಪಾ ಸದಸ್ಯರಾದ ಸುಮಂಗಲಾ ರಾವ್, ಕಾವೂರು ಸಿಆ‌ರ್ ಪಿ ದೀಪಿಕಾ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕಾರ್ಯದರ್ಶಿಗಳಾದ ವಿಕೇಶ್ ಮತ್ತು ಲಾವಣ್ಯ ಶೆಟ್ಟಿ, ನ್ಯಾಯವಾದಿ ಗುರುಪ್ರಸಾದ್ , ನಿವೃತ್ತ ಮುಖ್ಯ ಶಿಕ್ಷಕರಾದ ಚಂದ್ರಾವತಿ ಸುರೇಂದ್ರನಾಥ ಶೆಟ್ಟಿ,ಭುಜಂಗ ಪೂಜಾರಿ, ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷಲಕ್ಷ್ಮಣ ಛಲವಾದಿ, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ನಿತೇಶ್ ಕಾವೂರು, ಅಜಿತ್, ಶಿತೇಶ್ ಕೊಂಡೆ, ಸಮಾಜ ಸೇವಕರಾದ ‌ ಹಸನಬ್ಬ, ಪೆಲ್ಲಿರೆಗೋ.ಅಶ್ವಿನಿ, ಗೋಕುಲ್ ದಾಸ್ ಪ್ರಭು, ಅರ್ಚನಾ, ಕೃಷ್ಣಪ್ಪ ಸಾಲ್ಯಾನ್, ಕುಸುಮಕರ್, ಶಾಲಾ ಶಿಕ್ಷಕರು, ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಎಸ್‌ ಡಿಎಂಸಿಯ ಸದಸ್ಯರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ ಚೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು