8:53 PM Thursday11 - September 2025
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ…

ಇತ್ತೀಚಿನ ಸುದ್ದಿ

ಮಂಗಳೂರು ನೂತನ ಮೇಯರ್ ಬಿಜೆಪಿಯ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ: ಸಂಸದ, ಶಾಸಕರ ಅಭಿನಂದನೆ

19/09/2024, 21:35

ಮಂಗಳೂರು(reporterkarnataka.com): ಮಂಗಳೂರಿನ‌ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಹಾಗೂ ಉಪ ಮೇಯರ್ ಆಗಿ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.
ಮನೋಜ್ ಕುಮಾರ್ 25ನೇ ಅವಧಿಯ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿಜೆಪಿಯ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.


ನೂತನ ಮೇಯರ್ ಹಾಗೂ ಉಪ ಮೇಯರ್ ಮುಂದಿನ 6 ತಿಂಗಳುಗಳ ಕಾಲ ಆಡಳಿತ ನಡೆಸಲಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ಮೀಸಲಿಡಲಾಗಿತ್ತು.
ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಜಾತಿ(ಎಸ್‌ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ ಅವರು 2 ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿದೆ.
ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್ ಮತ್ತು ಕಾಂಗ್ರೆಸ್‌ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂತೆಗೆದುಕೊಳ್ಳಲು 5 ನಿಮಿಷ ಅವಕಾಶ ನೀಡಿದ್ದು, ವನಿತಾ ಪ್ರಸಾದ್ ನಾಮಪತ್ರ ಹಿಂತೆಗೆಕೊಂಡರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ ಭಾನುಮತಿ ಅವರು ಚುನಾವಣಾ ಕಣದಲ್ಲಿದ್ದರು. ಜೀನತ್ ಸಂಶುದ್ದೀನ್ ಪರ 14 ಮತ ಬಿದ್ದರೆ, ಭಾನುಮತಿಯವರಿಗೆ 47 ಮತ ಚಲಾವಣೆಯಾಯಿತು. ಈ ಮೂಲಕ ಭಾನುಮತಿಯವರು ಉಪಮೇಯರ್ ಆಗಿ ಆಯ್ಕೆಯಾದರು.
ತರಿಗೆ ಹಣಕಾಸು ಸ್ಥಾಯಿ ಸಮಿತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಸುಧಾರಣೆ ಸ್ಥಾಯೀ ಸಮಿತಿ, ಲೆಕ್ಕಪತ್ರ ಸ್ಥಾಯಿಸಮಿತಿ ಸೇರಿದಂತೆ ನಾಲ್ಕು ಸ್ಥಾಯಿ ಸಮಿತಿಗೆ ತಲಾ 7 ಮಂದಿ ಸದಸ್ಯರಂತೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ನಡೆದ ವೇಳೆ 65 ಮನಪಾ ಸದಸ್ಯರಲ್ಲಿ 61 ಮಂದಿ ಹಾಜರಿದ್ದು, ಚುನಾವಣೆಯಲ್ಲಿ ಪಾಲ್ಗೊಂಡರು. ಮೈಸೂರು ರೀಜನಲ್ ಕಮಿಷನರ್ ರಮೇಶ್ ಡಿ.ಎಸ್. ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರು.
ನೂತನವಾಗಿ ಮೇಯರ್, ಉಪ ಮೇಯರ್‌ಗಳಿಗೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮನಪಾ ಸದಸ್ಯರು, ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು