3:50 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚಾಲಕನ ಅತಿ ವೇಗ: ರಸ್ತೆ ಡಿವೈಡರ್ ಗೆ ನುಗ್ಗಿದ ಖಾಸಗಿ ಮಿನಿ ಬಸ್; ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡ ಅಯ್ಯಪ್ಪ ಸ್ವಾಮಿ ಭಕ್ತರು

21/09/2024, 10:17

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹೊರ ರಾಜ್ಯ ಕೇರಳದಿಂದ ಅಯ್ಯಪ್ಪ ಸ್ವಾಮಿ ದರ್ಶನವನ್ನು ಪಡೆದುಕೊಂಡು ಊಟಿ ರಸ್ತೆಯ ಮಾರ್ಗವಾಗಿ ಮೈಸೂರು ಕಡೆ ಬರುತ್ತಿದ್ದ ಮಿನಿ ಬಸ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿಕೊಂಡಿರುವ ಘಟನೆ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ಬೆಂಗಳೂರು ಕಾಮಾಕ್ಷಿಪಾಳ್ಯ ಬೊಮ್ಮಸಂದ್ರ ಮೂಲದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ದರ್ಶನ ಮಾಡುವ ಸಲುವಾಗಿ ಕೆ ಎ 51 ಬಿ 5616 ನಂಬರಿನ ಖಾಸಗಿ ಮಿನಿ ಬಸ್ ನಲ್ಲಿ ಕೇರಳಕ್ಕೆ ತೆರಳಿದ್ದಾರೆ.


ಸುಲಲಿತವಾಗಿ ದರ್ಶನ ಪಡೆದುಕೊಂಡು ಮರಳುತ್ತಿರುವಾಗ ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಂಜನಗೂಡಿನ ಹೊಸಹಳ್ಳಿ ಗೇಟ್ ಬಳಿ ಅಯ್ಯಪ್ಪ ಸ್ವಾಮಿ ಭಕ್ತರು ತೆರಳುತ್ತಿದ ಮಿನಿ ಬಸ್ ಚಾಲಕನ ಅತಿ ವೇಗ ಮತ್ತು ನಿದ್ರೆಗೆ ಜಾರಿದ ಪರಿಣಾಮ ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ 20 ಜನ ಅಯ್ಯಪ್ಪ ಸ್ವಾಮಿ ಭಕ್ತರು ಕೂದಲೆಳೆಯ ಅಂತರದಲ್ಲಿ ಜೀವ ಬದುಕಿಸಿ ಕೊಂಡಿದ್ದಾರೆ‌ ಸಣ್ಣಪುಟ್ಟ ಗಾಯಗಳಾಗಿರುವ ಇವರು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ನಂಜನಗೂಡು ಸಂಚಾರಿ ಪೊಲೀಸರು ಘಟನೆ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಲು ಮುಂದಾಗಿದ್ದಾರೆ.
ಮಿನಿ ಬಸ್ ಅಪಘಾತದಿಂದ ಬಿಡಿ ಭಾಗಗಳು ಛಿದ್ರ ವಾಗಿರುವ ದೃಶ್ಯ ನೋಡಿದ ಸಾರ್ವಜನಿಕರು ಬಸ್ಸಿನಲ್ಲಿ ಚಲಿಸುತ್ತಿದ್ದ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಪುನರ್ಜನ್ಮ ಎನ್ನುತ್ತಿದ್ದಾರೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು