2:14 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಗ್ರಾಹಕರ ಹಣಕ್ಕೆ ಕನ್ನ ಹಾಕಿದ್ದ ಆರೋಪಿ, ಯಡೂರಿನ ರಾಷ್ಟ್ರೀಕೃತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

21/09/2024, 21:21

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಶೋಕಿ ಜೀವನ, ದಿಢೀರ್ ಹಣ ಮಾಡುವ ದುರಾಸೆಗೆ ಬಿದ್ದು ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ಪೋರ್ಜರಿ ಮಾಡಿ ವಂಚನೆ ಮಾಡಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ತೀರ್ಥಹಳ್ಳಿ ತಾಲೂಕಿನ ಆರಗದ ಸುನಿಲ್ ( 35 ) ಮೃತ ದುರ್ದೈವಿ. ಈತ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ
ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ 8 ಅಕೌಂಟ್ ಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿಗೂ ಅಧಿಕ ಹಣವನ್ನು ವಂಚಿಸಿದ್ದ. ಈ ಬಗ್ಗೆ 2023 ಡಿಸೆಂಬರ್ ನಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಸುನಿಲ್ ಜೈಲಿಗೆ ಸಹ ಹೋಗಿದ್ದ.
ನಂತರ ಜಾಮೀ ಮೇಲೆ ಹೊರ ಬಂದಿದ್ದ. ಈತ ಆನ್ಲೈನ್ ವ್ಯವಹಾರದಲ್ಲಿ ಹಣ ಕಳೆದುಕೊಂಡಿದ್ದ ಎಂದು ಹೇಳಲಾಗುತ್ತಿದೆ. ಆನ್ಲೈನ್ ವ್ಯವಹಾರ ನಡೆಸಿ ಹಣ ಕಳೆದುಕೊಂಡ ಸುನಿಲ್ ಮೊನ್ನೆ ಗುರುವಾರ ವಿಷ ಸೇವಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು