12:57 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ವಿದ್ವತ್ ಪದವಿಪೂರ್ವ ಕಾಲೇಜು: ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೆ ಸೆ.22ರಂದು ಪರೀಕ್ಷಾ ಕಾರ್ಯಾಗಾರ

21/09/2024, 22:55

ಬೆಳ್ತಂಗಡಿ(reporterkarnataka.com): ಬೆಳ್ತಂಗಡಿ ಹಾಗೂ ಸುತ್ತಮುತ್ತಲಿನ ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿಗಳಿಗೊಂದು ಸುವರ್ಣಾವಕಾಶ. ದ್ವಿತೀಯ ಪಿಯು ವಿದ್ಯಾರ್ಥಿಗಳಿಗಿರುವ ಅವಕಾಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ, ಪರೀಕ್ಷೆಗಳಿಗೆ ತಯಾರಾಗುವ ಬಗೆ, ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನೆನಪಿನ ಶಕ್ತಿ ವೃದ್ಧಿಯ ಬಗ್ಗೆ ವಿಸ್ತ್ರುತ ಮಾಹಿತಿಯ ಓರಿಯಂಟೇಷನ್ ಕಾರ್ಯಕ್ರಮ ಇದೇ ಸಪ್ಟೆಂಬರ್ 22ರ ಭಾನುವಾರ ಬೆಳಿಗ್ಗೆ 11:30 ಕ್ಕೆ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜಿನಲ್ಲಿ ನಡೆಯಲಿದೆ.
ಈ ಓರಿಯಂಟೇಷನ್ ನಲ್ಲಿ ನೀಟ್, ಜೆಇಇ, ಸಿಯುಇಟಿ (CUET),ಐಸಿಎಆರ್ (ICAR) ಸಿಯಿಟಿ (CET), ಹೋಟೆಲ್ ಮ್ಯಾನೆಜ್ಮೆಂಟ್, ಪ್ಯಾರಾ- ಮೆಡಿಕಲ್, ಎನ್ ಡಿ ಎ (NDA ), ಹೀಗೆ ಹತ್ತು ಹಲವು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು, ಅದು ಅಲ್ಲದೆ ಈ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ ಹಾಗೂ ವಿದ್ಯಾರ್ಥಿ ವೇತನಗಳ ಬಗ್ಗೆಯೂ ಮಾಹಿತಿ ವಿನಿಮಯ ಮಾಡಿಕೊಳ್ಳಲಾಗುವುದು.
ದ್ವಿತಿಯ ಪಿಯು ವಿಜ್ಞಾನ ವಿದ್ಯಾರ್ಥಿಗಳು ವೈಜ್ಞಾನಿಕ ಸ್ಟಡಿ ಮಾದರಿ ಹಾಗೂ ನಿಖರ ಫಲಿತಾಂಶಕ್ಕಾಗಿ ನೆನಪಿನ ಶಕ್ತಿಯ ವೃದ್ಧಿ ಹೇಗೆ ಮಾಡಿಕೊಳ್ಳಬೇಕೆಂಬ ಬಗ್ಗೆ ಹೆಸರಾಂತ ಆಪ್ತ ಸಮಾಲೋಚನ ತಜ್ಞ ಗಂಗಾಧರ ಇ. ಮಂಡಗಳಲೆ ಯವರು ತರಬೇತಿ ನೀಡಲಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಗಳ ಹೆಸರಾಂತ ತರಬೇತಿದಾರರು ಹಾಗೂ ವಿಷಯ ತಜ್ಞರಾದ ಪ್ರತಾಪ್ ದೊಡ್ಡಮನೆ ಯವರು ಮಾಹಿತಿ ನಿಡಲಿದ್ದಾರೆ. ಈ ಕಾರ್ಯಾಗಾರ ಸಂಪೂರ್ಣ ಉಚಿತವಾಗಿದ್ದು, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು ತಾಲೂಕುಗಳ ದ್ವಿತೀಯ ಪಿಯು ವಿಜ್ಞಾನ ವಿದ್ಯಾರ್ಥಿ ಹಾಗೂ ಅವರ ಪೋಷಕರು ಇದರಲ್ಲಿ ಭಾಗಿಯಾಗಿ ಇದರ ಸಂಪೂರ್ಣ ಪ್ರಯೋಜನ ಪಡೆಯಬಹುದು ಎಂದು ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಕಾಶಿನಾಥ್ ಎಂ.ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರಿಗೆ ಸಂಪರ್ಕಿಸಿ

7618718791, 7618718792

ಇತ್ತೀಚಿನ ಸುದ್ದಿ

ಜಾಹೀರಾತು