8:47 PM Friday10 - January 2025
ಬ್ರೇಕಿಂಗ್ ನ್ಯೂಸ್
ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ… ಎಂಎಸ್‌ ಐಎಲ್‌ ಟೂರ್‌ ಪ್ಯಾಕೇಜ್‌ ಗೆ ಸಚಿವ ಎಂ. ಬಿ. ಪಾಟೀಲ್ ಚಾಲನೆ ಜ.10-12: ಸೌತ್ ಏಷ್ಯಾ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್-2025; ದೇಶ – ವಿದೇಶದ 2…

ಇತ್ತೀಚಿನ ಸುದ್ದಿ

ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​

21/09/2024, 23:03

ಗಣೇಶ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಅಮೆರಿಕದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ವಾರ್ಷಿಕ ಪಟ್ಟಿಯಲ್ಲಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.
ವಿವಿಯ ಗಣಿತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ್ ಮತ್ತು ಗಣಿತಶಾಸ್ತ್ರ ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ.ಹನುಮೇಶ್ ವೈದ್ಯ ಸತತ ಎರಡನೇ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಅಶ್ವಿನ್ ಪಿ. ಇದೇ ಮೊದಲ ಬಾರಿ ಸ್ಥಾನ ಪಡೆದಿದ್ದಾರೆ.
ವಿಶ್ವದರ್ಜೆಯ ಗುಣಮಟ್ಟದ ಸಂಶೋಧನಾ ಲೇಖನ, ಸಂಯೋಜಿತ ಮಾನದಂಡಗಳನ್ನು ಆಧರಿಸಿ ವಿಶ್ವದ ಉತ್ತಮ ಸಂಶೋಧಕರನ್ನು ಗುರುತಿಸಿ ಸ್ಟ್ಯಾನ್‌ಫೋರ್ಡ್‌ ವಿಶ್ವವಿದ್ಯಾಲಯವು ವಾರ್ಷಿಕ ಪಟ್ಟಿ ಬಿಡುಗಡೆ ಮಾಡುತ್ತದೆ.
ಗುಣಮಟ್ಟದ ಸಂಶೋಧನಾ ಲೇಖನಗಳಿಗೆ ಹೆಸರುವಾಸಿಯಾಗಿರುವ ‘ಎಲ್ಸ್ವೀಯರ್’ ಎಂಬ ಸಂಸ್ಥೆ ಸಹಭಾಗಿತ್ವದಲ್ಲಿ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯವು ಕಳೆದ ವಾರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಪಂಚದ ಒಟ್ಟು ಸಂಶೋಧನಕಾರರಲ್ಲಿ ಶೇ. 2ರಷ್ಟು ಖ್ಯಾತನಾಮ ವಿಜ್ಞಾನಿಗಳನ್ನು ವಿವಿಧ ವರ್ಗಗಳಲ್ಲಿ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು