ಇತ್ತೀಚಿನ ಸುದ್ದಿ
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು ಪಲ್ಟಿ; 3 ಮಂದಿಗೆ ತೀವ್ರ ಗಾಯ
21/09/2024, 23:53
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಪ್ರವಾಸಿ ಕಾರೊಂದು 30 ಅಡಿ ಎತ್ತರದಿಂದ ಹಾರಿ ಪಂಚಾಯಿತಿ ಆವರಣಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ನಡೆದಿದೆ.







ದಟ್ಟ ಮಂಜಿನಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ.
ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಪ್ರವಾಸಿ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
30 ಅಡಿ ಎತ್ತರದ ಪ್ರದೇಶದಿಂದ ಕಾರು ಬಿದ್ದ ರಭಸಕ್ಕೆ ಕಾರು ಬಹುತೇಕ ಜಖಂಗೊಂಡಿದೆ.
ಎತ್ತರದ ಪ್ರದೇಶದ ಮೇಲಿನ ರಸ್ತೆಯಿಂದ ಕೆಳಗಡೆ ಇದ್ದ ಪಂಚಾಯಿತಿ ಒಳಕ್ಕೆ ಕಾರು ಬಿದ್ದಿದೆ. ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














