ಇತ್ತೀಚಿನ ಸುದ್ದಿ
2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ
22/09/2024, 23:25
ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಎಸ್. ಸುರೇಶ್ ಅವರು ಹಿಂದೂಸ್ತಾನ್ ಏರೋನಾಟಿಕ್ ಲಿಮಿಟೆಡ್ ಬೆಂಗಳೂರು ವತಿಯಿಂದ 2013-24ನೇ ಸಾಲಿನ ಸಿ.ಎಸ್.ಆರ್ ಯೋಜನೆಯಡಿಯಲ್ಲಿ ಸುಮಾರು 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ಉದ್ಘಾಟನೆ ಮಾಡಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ನಸೀರ್ ಅಹಮದ್, ಕೋಲಾರ ಶಾಸಕ ಕೊತ್ತೂರ್ ಜಿ ಮಂಜುನಾಥ, ವಿಧಾನ ಪರಿಷತ್ ಸದಸ್ಯ ಎಂ. ಎಲ್. ಅನಿಲಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ. ನಿಖಿಲ್, ಯುವಜನಾ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಗೀತಾ, ಬೆಂಗಳೂರು ಎಚ್.ಎ.ಎಲ್ ಸಂಸ್ಥೆಯ ಎಜಿಎಂ ಸಿ.ಕೆ ಮಂಜುನಾಥ್, ಡಿಜಿಎಂ ಸಾಯಿ ಕೃಷ್ಣ ಹಾಗೂ ಮುಖ್ಯ ವ್ಯವಸ್ಥಾಪಕರು ಶ್ರೀನಿವಾಸ್ ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.