6:05 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಮುಡಾ ಹಗರಣ: ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಶನ್ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದ ಹೈಕೋರ್ಟ್

24/09/2024, 13:04

ಬೆಂಗಳೂರು(reporterkarnataka.com): ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹೈಕೋರ್ಟ್ ನಲ್ಲಿ ಭಾರೀ ಹಿನ್ನಡೆಯಾಗಿದೆ. ರಾಜ್ಯಪಾಲರ ಕ್ರಮವನ್ನು ಸಮರ್ಥಿಸಿರುವ ಹೈಕೋರ್ಟ್ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದೆ.
ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ.
ಸಿಎಂ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಸಂಬಂಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದರು. ರಾಜ್ಯಪಾಲರು ಮುಡಾ ಹಗರಣ ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ಧರಾಮಯ್ಯ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಹೈಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು