11:03 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್

24/09/2024, 20:38

ಮಂಗಳೂರು(reporterkarnataka.com): ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು-ಮಡಿಕೇರಿ, ಮಂಗಳೂರು-ಕೊಲ್ಲೂರು, ಮಂಗಳೂರು-ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅಕ್ಟೋಬರ್ 3ರಿಂದ 12ರ ವರೆಗೆ ಆಯೋಜಿಸಲಾಗಿದೆ.
ಪ್ಯಾಕೇಜ್ ಪ್ರವಾಸದ ಮಾರ್ಗ, ವೇಳೆ ಮತ್ತು ಪ್ರಯಾಣ ದರದ ವಿವರ:ಮಂಗಳೂರು ದಸರಾ ನವದುರ್ಗ ದರ್ಶನ ಪ್ಯಾಕೇಜ್ :
ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 8ಗಂಟೆಗೆ ಹೊರಟು, ಶ್ರೀ ಮಂಗಳಾದೇವಿ ದೇವಸ್ಥಾನ – ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ – ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ – ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – (ಮಧ್ಯಾಹ್ನದ ಊಟ) – ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಹಾಗೂ ಬೀಚ್ – ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ – ಶ್ರೀ ಉರ್ವ ಮಾರಿಯಮ್ಮ ದೇವಸ್ಥಾನ (ಸಂಜೆ ಉಪಹಾರ) – ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ, ನವದುರ್ಗಾ ದರ್ಶನ ರಾತ್ರಿ 8 ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. – ಒಟ್ಟು ಪ್ರಯಾಣದರ (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.400/- ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) ರೂ.300/- ಪ್ರಯಾಣ ದರ ನಿಗದಿಪಡಿಸಲಾಗಿದೆ.
ಮಡಿಕೇರಿ ಪ್ಯಾಕೇಜ್ ಪ್ರವಾಸ :
ಮಂಗಳೂರಿನಿಂದ ಬೆಳಿಗ್ಗೆ 7 ಗಂಟೆಗೆ ಹೊರಟು -ಮಡಿಕೇರಿ-ರಾಜಾಸೀಟ್-ಅಬ್ಬಿಫಾಲ್ಸ್-ನಿಸರ್ಗಧಾಮ- ಗೋಲ್ಡನ್ ಟೆಂಪಲ್ ಪ್ರವಾಸ ಕೈಗೊಂಡು ರಾತ್ರಿ 9ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.500/- ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) ರೂ.400/- ನಿಗದಿಪಡಿಸಲಾಗಿದೆ.
ಮಂಗಳೂರು-ಕೊಲ್ಲೂರು ಪ್ಯಾಕೇಜ್ ಪ್ರವಾಸ :
ಮಂಗಳೂರು ಬಸ್ ನಿಲ್ದಾಣದಿಂದ ಬೆಳಿಗ್ಗೆ 8 ಗಂಟೆಗೆ ಹೊರಟು – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ – ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ (ಮಧ್ಯಾಹ್ನದ ಊಟ) – ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ – ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಪ್ರವಾಸ ಕೈಗೊಂಡು ರಾತ್ರಿ 7 ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.500/- ಮಕ್ಕಳಿಗೆ (6ವರ್ಷದಿಂದ 12 ವರ್ಷದವರಿಗೆ) ರೂ.400/- ದರ ನಿಗದಿಪಡಿಸಲಾಗಿದೆ.
ಮಂಗಳೂರು-ಮುರುಡೇಶ್ವರ ಟೂರ್ ಪ್ಯಾಕೇಜ್
ಮಂಗಳೂರು ಬಸ್‍ ನಿಲ್ದಾಣ ದಿಂದ ಬೆಳಿಗ್ಗೆ 7 ಗಂಟೆಗೆ ಹೊರಟು – ಮುರುಡೇಶ್ವರ ದೇವಸ್ಥಾನ – ಚಂಡಿಕಾ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕುಂಭಾಶಿ – ಆನೆಗುಡ್ಡೆ ಗಣಪತಿ ದೇವಸ್ಥಾನ ಕುಂಭಾಶಿ – ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಪ್ರವಾಸ ಕೈಗೊಂಡು ರಾತ್ರಿ 7 ಗಂಟೆಗೆ ಮಂಗಳೂರು ಬಸ್ ನಿಲ್ದಾಣಕ್ಕೆ ಹಿಂದಿರುಗಲಾಗುತ್ತದೆ. (ಊಟ, ಉಪಹಾರ ಹೊರತುಪಡಿಸಿ) ವಯಸ್ಕರಿಗೆ ರೂ.550/- ಮಕ್ಕಳಿಗೆ (6 ವರ್ಷದಿಂದ 12 ವರ್ಷದವರಿಗೆ) ರೂ.450/- ದರ ನಿಗದಿಪಡಿಸಲಾಗಿದೆ.
ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಸದರಿ ಸಾರಿಗಳಿಗೆ ತಿತಿತಿ.ಞsಡಿಣಛಿ.iಟಿ ನಲ್ಲಿ ಮುಂಗಡ ಆಸನ ಕಾಯ್ದಿರಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 7760990702, 7760990711,ಮಂಗಳೂರು-1ನೇ ಘಟಕ ವ್ಯವಸ್ಥಾಪಕರು, ದೂರವಾಣಿ ಸಂಖ್ಯೆ ; 7760990713, ಮಂಗಳೂರು-3ನೇ ಘಟಕ ವ್ಯವಸ್ಥಾಪಕರು, ದೂರವಾಣಿ ಸಂಖ್ಯೆ – 7760990723, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್, ದೂರವಾಣಿ ಸಂಖ್ಯೆ 9663211553, ಮಂಗಳೂರು ಬಸ್ ನಿಲ್ದಾಣ, ದೂರವಾಣಿ ಸಂಖ್ಯೆ : 7760990720 ಸಂಪರ್ಕಿಸುವಂತೆ ಕೆಎಸ್‍ಆರ್‍ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು