4:42 PM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ

24/09/2024, 20:50

ಮಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಸಾವಿರಾರು ಕೋಟಿ ರೂ. ಗಳ ಮುಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಧಾರ ಸರಿಯಾಗಿದೆ ಎಂದು ಆದೇಶ ನೀಡಿದ ರಾಜ್ಯದ ಉಚ್ಚ ನ್ಯಾಯಾಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದ್ದು ಸಿದ್ದರಾಮಯ್ಯನವರು ತನಿಖೆಯ ದೃಷ್ಟಿಯಿಂದ ಇನ್ನಾದರೂ ರಾಜೀನಾಮೆ ನೀಡಲಿ ಎಂದು ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು.


ಮುಖ್ಯಮಂತ್ರಿಗಳ ಕುಟುಂಬದ ಪರವಾಗಿ ಅಕ್ರಮ ನಡೆದಿರುವುದು ದಾಖಲೆಗಳ ಸಮೇತ ಕಣ್ಣಿಗೆ ರಾಚುತ್ತಿದ್ದರೂ ನಾನ್ಯಾಕೆ ರಾಜೀನಾಮೆ ಕೊಡಲಿ? ಬೇಕಿದ್ದರೆ ರಾಜ್ಯಪಾಲರೇ ರಾಜೀನಾಮೆ ಕೊಡಲಿ ಎಂದು ಭಂಡತನ ಪ್ರದರ್ಶಿಸಿದ್ದ ಸಿದ್ದರಾಮಯ್ಯನವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ನ್ಯಾಯಪೀಠವೇ ಸಿದ್ದರಾಮಯ್ಯನವರ ಅರ್ಜಿಯನ್ನು ತಿರಸ್ಕರಿಸಿದ್ದು, ಇನ್ನಾದರೂ ಭಂಡತನವನ್ನು ಬಿಟ್ಟು ತಮ್ಮ ವಿರುದ್ಧದ ತನಿಖೆಗೆ ಸಹಕರಿಸಲು ಹಾಗೂ ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಉಳಿಸಲು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.
ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಒಂದೊಂದು ಹಗರಣಗಳಿಗೂ ನ್ಯಾಯಾಲಯದಿಂದ ಇಂತಹದೇ ತೀರ್ಪು ಬಂದಲ್ಲಿ ಇಡೀ ಸಚಿವ ಸಂಪುಟವೇ ರಾಜೀನಾಮೆ ನೀಡುವ ಸ್ಥಿತಿ ನಿರ್ಮಾಣವಾಗಲಿದ್ದು ಆ ಮೂಲಕ ಭ್ರಷ್ಟ ಕಾಂಗ್ರೆಸ್ ಸರ್ಕಾರ ಅಧಿಕಾರದಿಂದ ತೊಲಗುವುದು ಖಚಿತವೆಂದು ಶಾಸಕರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು