2:05 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಅಥಣಿ: ಭಾರೀ ಮಳೆಗೆ ನೀರಿನಲ್ಲಿ ಕೊಚ್ಚಿ ಹೋಗಿ ವೃದ್ಧ ಸಾವು; ಹಳ್ಳ ದಾಟುತ್ತಿದ್ದಾಗ ನಡೆದ ದುರ್ಘಟನೆ

25/09/2024, 13:58

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನಲ್ಲಿ ನಿನ್ನೆ ಸುರಿದ ಮಳೆಯ ಅಬ್ಬರಕ್ಕೆ ಅಥಣಿಯಲ್ಲಿ ನಸುಕಿನ ಜಾವ ದೇವರ ದರ್ಶನಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಭಾರಿ ಮಳೆ ನೀರಿನ ರಭಸಕ್ಕೆ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಅಥಣಿ ಪಟ್ಟಣದ ಜೇರೇ ಗಲ್ಲಿ ನಿವಾಸಿ ಗುರುರಾಜ್ ಈರಪ್ಪ ಯಾದವಾಡ (75) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಇಂದು ನಸುಕಿನ ಜಾವ ದೇವರ ದರ್ಶನಕ್ಕೆ ಮಸೊಭಾ ಹಳ್ಳ ದಾಟುವಾಗ ನೀರಿನ ರಭಸಕ್ಕೆ ಅವರು ಕೊಚ್ಚಿ ಹೋಗಿದ್ದರು. ಅವರ ಶವ ಆಜಾದ್ ಸರ್ಕಲ್ ಬಳಿಯ ಅಗಸಿ ಹತ್ತಿರ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು