5:18 PM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಓವರ್ ಟೇಕ್ ಮಾಡಲು ಹೋಗಿ ಸೇತುವೆಗೆ ಡಿಕ್ಕಿ ಹೊಡೆದ ಖಾಸಗಿ ಬಸ್: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

25/09/2024, 19:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಓವರ್ ಟೇಕ್ ಮಾಡಲು ಹೋಗಿ ಖಾಸಗಿ ಬಸ್ಸೊಂದು
ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡ ಘಟನೆ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ಬಳಿ ನಡೆದಿದೆ.


ಸೇತುವೆಗೆ ಗುದ್ದಿ ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ.
ಚಾಲಕನ ಅಜಾಗರೂಕತೆ ಹಾಗೂ ಅತಿಯಾದ ವೇಗ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಭದ್ರಾವತಿಯಿಂದ ತರೀಕೆರೆಗೆ ಬರುತ್ತಿದ್ದ ಖಾಸಗಿ ಬಸ್ ಇದಾಗಿದೆ. ಗಾಯಾಳು ವಿದ್ಯಾರ್ಥಿಗಳಿಗೆ ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕಿರಿದಾದ ಸೇತುವೆ ಬಳಿ ಮತ್ತೊಂದು ಬಸ್ ಓವರ್ ಟೇಕ್ ಮಾಡಲು ಹೋದಾಗ ಅನಾಹುತ ನಡೆದಿದೆ. ಖಾಸಗಿ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು