9:24 PM Wednesday10 - September 2025
ಬ್ರೇಕಿಂಗ್ ನ್ಯೂಸ್
ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆದರಿಕೆ: ಆರೋಪಿ ಬಂಧನ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ: ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ… Kodagu | ಚೋರರಿದ್ದಾರೆ ಎಚ್ಚರಿಕೆ: ಕುಶಾಲನಗರ; ಹೆಚ್ಚುತ್ತಿರುವ ಶ್ರೀಗಂಧ ಮರಗಳ ಕಳ್ಳತನ

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ: ದಸರಾ ಕ್ರೀಡಾಕೂಟ ಉದ್ಘಾಟಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

26/09/2024, 21:10

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು ದೇಶದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮೆಚ್ಚುಗೆ ವ್ಯಕ್ತಪಡಿಸಿದರು.
ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ನೆಹರು ಯುವ ಕೇಂದ್ರ ಹಾಗೂ ಜಿಲ್ಲಾ ಯುವಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.


ಹಲವು ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿ ಪದಕಗಳನ್ನು ಗೆಲ್ಲುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಉತ್ತಮ ಸೌಲಭ್ಯಗಳು ಜಿಲ್ಲೆಯಲ್ಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿಎಲ್, ನೆಹರು ಯುವ ಕೇಂದ್ರ ಆಡಳಿತಾಧಿಕಾರಿ ಜಗದೀಶ್ ಕೆ, ಜಿಲ್ಲಾ ಯುವಜನ ಒಕ್ಕೂಟ ಅಧ್ಯಕ್ಷ ಸುರೇಶ್ ಸೂಡಿ ಮುಳ್ಳು, ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್ ಅಧ್ಯಕ್ಷ ಡಿ.ಎಂ. ಅಸ್ಲಂ, ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಭರತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು