9:05 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ: ಬೇಡಿಕೆ ಈಡೇರಿಕೆಗೆ ಆಗ್ರಹ

27/09/2024, 15:04

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಸರ್ಕಾರದಿಂದ ಹಲವು ಯೋಜನೆಗಳು ಜಾರಿಯಾಗಿವೆ. ಆಧುನೀಕರಣವಾಗಿ, ತಾಂತ್ರಿಕವಾಗಿ ಎಲ್ಲಾ ಸಲಕರಣೆ ನೀಡದೇ ಕೆಲಸಗಳನ್ನು ಮೊಬೈಲ್ ನಲ್ಲಿ ಮಾಡುವಂತೆ ಒತ್ತಡ ಹಾಕುತ್ತಿದ್ದಾರೆ. ಇದರ ಬಗ್ಗೆ ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಸ್ಪಂದನೆ ನೀಡಿಲ್ಲ ಎಂದು ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಅಧ್ಯಕ್ಷರಾದ ಚಂದ್ರಶೇಖರ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಎದುರು ಗುರುವಾರದಿಂದ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಸಂದರ್ಭದಲ್ಲಿ ಮಾತನಾಡಿ ನಮಗೆ ಯಾವುದೇ ಕಚೇರಿ ಇಲ್ಲ, ಕೂರಲು ಕುರ್ಚಿ ಇಲ್ಲ, ಯಾವುದೇ ಗ್ರಾಮಕ್ಕೆ ಹೋದರೂ, ಅರಳಿ ಮರದ ಕೆಳಗೆ, ಸ್ಕೂಲ್, ಅಂಗನವಾಡಿ, ಅಥವಾ ಬೈಕ್ ನಲ್ಲಿ ಹೋಗುವಾಗ ರೈತರು ಸಿಕ್ಕಿದರೆ ಅದೇ ಜಾಗದಲ್ಲಿ ಸಹಿ, ಸೀಲ್ ಹಾಕಿ ಕೊಡುತ್ತೇವೆ. ನಾವು ಕಷ್ಟಪಟ್ಟು ಕೆಲಸ ಮಾಡುತ್ತಿರುವುದು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ, ಇಲ್ಲಿಯವರೆಗೆ ಯಾವುದೇ ಮೊಬೈಲ್, ಡಾಟಾ ಕೊಟ್ಟಿಲ್ಲ, ತಾಂತ್ರಿಕವಾಗಿ ಬದಲಾವಣೆ ಆಗಿದೆ. ಆದರೆ ಕೆಲಸ ಮಾಡಲು ಯಾವುದೇ ಅಗತ್ಯವಾದ ಸಲಕರಣೆ ನೀಡಿಲ್ಲ ಎಂದರು.
ಗ್ರಾಮ ಆಡಳಿತ ಅಧಿಕಾರಿಗಳಾದ ಸುಧೀರ್ ಮಾತನಾಡಿ, ಕಂದಾಯ ಇಲಾಖೆಯನ್ನು ಮಾತೃ ಇಲಾಖೆ ಎಂದು ಪರಿಗಣನೆ ಮಾಡಿದ್ದಾರೆ. ಸಾರ್ವಜನಿಕರ ಹಾಗೂ ರೈತರ ಜೊತೆಗೆ ನಿಕಟ ಸಂಪರ್ಕ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇವೆ. ಈಗಿನ ತಂತ್ರಜ್ಞಾನ ಕಾಲದಲ್ಲಿ ಕಂದಾಯ ಇಲಾಖೆಯಲ್ಲಿರುವ 44 ಸಕಾಲ ಸೇವೆಗಳ ಪೈಕಿ 21 ಸೇವೆಗಳನ್ನು ನಮ್ಮ ಮೊಬೈಲ್ ಆಪ್ ನಲ್ಲಿ ಮಾಡಲು ವ್ಯವಸ್ಥೆ ಮಾಡಿದ್ದಾರೆ. ಆದರೆ ಅದಕ್ಕೆ ಬೇಕಾದ ಡಾಟಾ ಹಾಗೂ ಇತರ ಫೆಸಿಲಿಟಿ ಕೊಡುತ್ತಿಲ್ಲ ಎಂದರು.
ಎಲ್ಲಾ ತಂತ್ರಜ್ಞಾನವನ್ನು ಮೊಬೈಲ್ ನಲ್ಲೆ ಅಳವಡಿಕೆ ಮಾಡಿರುವುದರಿಂದ ನಾವೆಲ್ಲರೂ ಎರಡರಿಂದ ಮೂರು ಗಂಟೆ ಮೊಬೈಲ್ ನಲ್ಲೆ ಕಳೆಯುವಂತಾಗಿದೆ. ರಜಾ ದಿನಗಳಲ್ಲಿಯೂ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ ಅಷ್ಟೇ ಅಲ್ಲದೆ ಕೆಲಸ ಇದ್ದ ಸಂದರ್ಭದಲ್ಲಿ ಸಮಯ ಮೀರಿದ್ದರೂ ಕೆಲಸ ಮಾಡಿಸಿ ಕೊಳ್ಳುತ್ತಿದ್ದಾರೆ. ಅಗತ್ಯವಾದ ಸಲಕರಣೆ ಇಲ್ಲದ ಕಾರಣ ಸಾರ್ವಜನಿಕರಿಗೂ ಸರಿಯಾದ ಸಮಯಕ್ಕೆ ಕೆಲಸ ಮಾಡಿಕೊಡಲು ಆಗುತ್ತಿಲ್ಲ ಎಂದರು.
ಗ್ರಾಮ ಆಡಳಿತ ಅಧಿಕಾರಿಯಾಗಿ ಕೆಲಸಕ್ಕೆ ಸೇರಿದರೆ 30 ವರ್ಷಗಳ ಕಾಲ ಸೇವೆ ಮಾಡಿದರೂ ಸಹ ಗ್ರಾಮ ಆಡಳಿತ ಅಧಿಕಾರಿಯಾಗಿಯೇ ನಿವೃತ್ತಿಯಾಗುತ್ತಿದ್ದಾರೆ. ವರ್ಗಾವಣೆ ವಿಚಾರದಲ್ಲೂ ಸಹ ತಡೆದಿದ್ದಾರೆ. ಜಾತಿ ವಿಚಾರದಲ್ಲಿ ಸಣ್ಣ ತಪ್ಪುಗಳು ಆದರೂ ನಮ್ಮ ಮೇಲೆ ಕೇಸ್ ದಾಖಲು ಮಾಡುವ ಕೆಲಸ ಆಗುತ್ತಿದೆ ಅದು ನಿಲ್ಲಬೇಕು, ನಮ್ಮ ಬೇಡಿಕೆಗಳನ್ನು ಸ್ಪಂದಿಸದೆ ಇದ್ದರೆ ಅನಿರ್ದಿಷ್ಟಾವಧಿ ಮುಷ್ಕರದಿಂದ ಹಿಂದೆ ಸರಿಯುವುದಿಲ್ಲ ಎಂದರು.
ಈ ಸಂದರ್ಭದಲ್ಲಿ 30ಕ್ಕೂ ಹೆಚ್ಚು ಗ್ರಾಮ ಆಡಳಿತ ಅಧಿಕಾರಿಗಳು ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು