5:54 PM Saturday21 - December 2024
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ? ಸಿ.ಟಿ.ರವಿ ಬಂಧನ: ಚಿಕ್ಕಮಗಳೂರು, ಕೊಟ್ಟಿಗೆಹಾರದಲ್ಲಿ ಬಿಜೆಪಿ ಭಾರೀ ಪ್ರತಿಭಟನೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್… ಮಂಗಳೂರು: ಹೊಸ ವರ್ಷದ ಆಚರಣೆಗೆ ತರಿಸಿದ್ದ 9 ಲಕ್ಷ ರೂ. ಮೌಲ್ಯದ ಡ್ರಗ್ಸ್… ಎನ್.ಆರ್.ಪುರ: ತಂದೆ- ಮಗನ ಮೇಲೆ ಕಾಡಾನೆ ದಾಳಿ; ತಂದೆ ಸಾವು; ಮಗ ತಪ್ಪಿಸಿಕೊಂಡು… ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಣೆ: ಸದನದಲ್ಲಿ ಸಿಎಂ… ರಾಜ್ಯದಲ್ಲಿ ಅನಧಿಕೃತವಾಗಿ ವಾಸವಿದ್ದ 24 ಪಾಕ್, 159 ಬಾಂಗ್ಲಾದೇಶ ಮೂಲದವರ ಬಂಧನ: ಗೃಹ… ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ ವಿಧೇಯಕ 2024ಕ್ಕೆ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ಗೃಹಲಕ್ಷ್ಮೀಯರ ಜತೆ ಸುವರ್ಣ ವಿಧಾನಸೌಧಕ್ಕೆ ಆಗಮಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್: ಫಲಾನುಭವಿಗಳು ಫುಲ್…

ಇತ್ತೀಚಿನ ಸುದ್ದಿ

ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನಾ

01/10/2024, 20:35

ಮಂಗಳೂರು(reporterkarnataka.com): ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ಮೂಲಮಂತ್ರಗಳು ವಿಶ್ವದಾದ್ಯಂತದ ಮಾಧ್ಯಮ ವ್ಯಕ್ತಿಗಳಿಗೆ ಮಾತ್ರವಲ್ಲ ಎಲ್ಲಾ ಮನುಷ್ಯರಿಗೆ ಕತ್ತಲಲ್ಲಿ ಮುನ್ನಡೆಸುವ ದಾರಿದೀಪಗಳಾಗಿವೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನಾ ಹೇಳಿದರು. ಅವರು ನಗರದ ಪದುವಾ ಬಳಿಯ ಸಿಒಡಿಪಿಯಲ್ಲಿ ಮಂಗಳವಾರ ನಡೆದ ಇಂಡಿಯನ್ ಕ್ಯಾಥೋಲಿಕ್ ಪ್ರೆಸ್ ಅಸೋಸಿಯೇಷನಿನ 29 ನೇ ರಾಷ್ಟ್ರೀಯ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಗಾಂಧೀಜಿಯವರು ನಮಗೆ ಅನ್ಯರ ಅಭಿಪ್ರಾಯಗಳನ್ನು ಗೌರವಿಸುವ ಪರಂಪರೆಯನ್ನು ಪಾಲಿಸಲು ಕರೆ ನೀಡಿದ್ದಾರೆ. ಆ ಕೋರಿಕೆಯಂತೆ ನಾವೆಲ್ಲರೂ ಜವಾಬ್ದಾರಿಯಿಂದ ಮುಂದುವರೆಯಬೇಕೆಂದು ಹಾಗೂ ಗಾಂಧೀಜಿಯವರಂತೆ ಇಂದಿನ ಎಲ್ಲಾ ಪತ್ರಕರ್ತರು ನಿರ್ಭೀತರೂ ಸತ್ಯಪಕ್ಷಪಾತಿಗಳಾಗಬೇಕೆಂದು ಕರೆ ನೀಡಿದರು.
ಮಾಧ್ಯಮಗಳ ಮೂಲಕ ಸತ್ಯದ ಹುಡುಕಾಟ ನಡೆಯುತ್ತಿದೆಯೇ? ಸತ್ಯ ನೋವು ನೀಡುತ್ತದೆ. ಆದರೆ ಅದು ನಿರ್ಗತಿಕರಿಗೆ ಬಲ ನೀಡುತ್ತದೆ ಎಂದು ಅವರು ತಿಳಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದ ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ. ಹೆನ್ರಿ ಡಿಸೋಜಾರವರು ಮಾತನಾಡಿ, ವಿವಿಧ ಒತ್ತಡಗಳ ನಡುವೆ ಸಿಲುಕಿ ಹೋಗಿರುವ ಇಂದಿನ ಮಾಧ್ಯಮ ಜಗತ್ತಿನಲ್ಲಿ ಗಾಂಧೀಜಿಯವರ ಚಿಂತನೆಗಳು ಅಪ್ರಸ್ತುತ ಎನ್ನುವಂತೆ ಕಾಣುತ್ತಿದೆಯಾದರೂ ವಾಸ್ತವವಾಗಿ ಬೆಳಕಿನ ಅಗತ್ಯವಿರುವುದು ಕತ್ತಲಿನ ನಡುವೆಯೇ ಎನ್ನುವುದನ್ನು ಮರೆಯಬಾರದು. ಇಂತಹ ಗೊಂದಲದ ನಡುವೆಯೇ ಪ್ರಜಾತಂತ್ರದ ಹಾಗೂ ಭಾರತೀಯತೆಯ ಬಲವನ್ನು ಹೆಚ್ಚಿಸಲು ಮಾಧ್ಯಮಗಳ ಪಾತ್ರದ ಕುರಿತು ಗಾಂಧೀಜಿಯವರ ಚಿಂತನೆಗಳನ್ನು ಪುನಃ ನಮ್ಮ ಪತ್ರಿಕೋದ್ಯಮದ ಕೇಂದ್ರ ಭಾಗವಾಗಿಸುವ ಅಗತ್ಯವಿದೆ ಎಂದು ಹೇಳಿದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಮಾವೇಶದ ಉದ್ಘಾಟಕರಾಗಿ ಉಪಸ್ಥಿತರಿದ್ದರು. ಮಂಗಳೂರು ಧರ್ಮಪ್ರಾಂತ್ಯದ ಶ್ರೇಷ್ಠ ಗುರುಗಳಾದ ಬಹು ವಂದನೀಯ ಮ್ಯಾಕ್ಸಿಮ್ ಎಲ್. ನರೊನ್ಹಾ, ಐಸಿಪಿಎ ಅಧ್ಯಕ್ಷರಾದ ಇಗ್ನೇಷಿಯಸ್ ಗೊನ್ಸಾಲ್ವಿಸ್, ಕಾರ್ಯದರ್ಶಿ ಫಾ. ಸುರೇಶ್ ಮ್ಯಾಥ್ಯೂ, ಕಾರ್ಯಕ್ರಮದ ಸಂಯೋಜಕರಾದ ರಾಕ್ಣೊ ವಾರಪತ್ರಿಕೆಯ ಸಂಪಾದಕರಾದ ವಂದನೀಯ ಫಾದರ್ ರೂಪೇಶ್ ಮಾಡ್ತಾ, ಸಿಒಡಿಪಿ ನಿರ್ದೇಶಕರಾದ ವಂದನೀಯ ಫಾದರ್ ವಿನ್ಸೆಂಟ್ ಡಿಸೋಜಾ ವೇದಿಕೆಯಲ್ಲಿ ಹಾಜರಿದ್ದರು. ದೇಶದ ವಿವಿಧ ರಾಜ್ಯಗಳ ಪತ್ರಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು