ಇತ್ತೀಚಿನ ಸುದ್ದಿ
ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು
02/10/2024, 16:42
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಗಾಂಧಿ ಜಯಂತಿಯಂದು ಕೊಟ್ಟಿಗೆಹಾರ, ಬಣಕಲ್ ಸುತ್ತಮುತ್ತ ಮಾಂಸದ ಅಂಗಡಿಗಳು ತೆರೆದಿವೆ. ಅಹಿಂಸಾ ತತ್ವವನ್ನು ಪ್ರತಿಪಾದಿಸಿದ್ದ ಗಾಂಧೀಜಿಯವರು ದೇಶದ ಪಿತಾಮಹ ಸ್ಥಾನದಲ್ಲಿದ್ದಾರೆ. ಆದರೆ ಸಂಬಂಧಿಸಿದ ಅಧಿಕಾರಿಗಳು ಮಾಂಸದ ಅಂಗಡಿಗಳಿಗೆ ಮಾರಾಟ ಮಾಡಲು ಅವಕಾಶ ನೀಡಿ ನಿಯಮ ಗಾಳಿಗೆ ತೂರಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪ್ರತಿ ವರ್ಷ ಗಾಂಧಿ ಜಯಂತಿಯಂದು ಬಾರ್ ಗಳು, ಮಾಂಸದ ಅಂಗಡಿಗಳು ಬಂದ್ ಆಗಲು ಸರ್ಕಾರ ಆದೇಶಿಸುತ್ತದೆ. ಆದರೆ ಈ ಬಾರಿ ಹಬ್ಬದ ನೆಪದಲ್ಲಿ ಮಾಂಸದ ಅಂಗಡಿಗಳು ತೆರೆದಿವೆ. ಸಂಬಂಧಿಸಿದ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.