3:30 AM Saturday5 - October 2024
ಬ್ರೇಕಿಂಗ್ ನ್ಯೂಸ್
ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

ಇತ್ತೀಚಿನ ಸುದ್ದಿ

ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ: ಸಾಕಾರಗೊಂಡ ಗಾಂಧಿ ಸ್ಮ್ರತಿ, ದೇಶಭಕ್ತಿ ಗೀತೆ

02/10/2024, 19:08

ಬೆಳ್ತಂಗಡಿ(reporterkarnataka.com): ವಿದ್ವತ್ ಪದವಿ ಪೂರ್ವ ಕಾಲೇಜಿನಲ್ಲಿ ವಿನೂತನವಾಗಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.
ಗಾಂಧಿ ಭಾವಚಿತ್ರದೊಂದಿಗೆ ದೀಪ ಪ್ರಜ್ವಲನ ಮತ್ತು ಪುಷ್ಪಾರ್ಚನೆ ಕಾರ್ಯಕ್ರಮವನ್ನು ಶೈಕ್ಷಣಿಕ ನಿರ್ದೇಶಕರು ಗಂಗಾಧರ ಇ ಮಂಡಗಳಲೆ, ಆಡಳಿತ ಅಧಿಕಾರಿ ಚಂದ್ರಶೇಖರ ಗೌಡ, ಪ್ರಾಂಶುಪಾಲರು ಅರುಣ್ ಕ್ಯಾಸ್ಟಲಿನೊ, ಉಪಪ್ರಾಂಶುಪಾಲರು ಜಯೇಂದ್ರ ಬಂದ್ಯಾನ್ ಮತ್ತು ವಿದ್ಯಾರ್ಥಿಗಳು ನೆರವೇರಿಸಿದರು.
ಗಾಂಧಿ ಜೀವನ ತತ್ವ ಮತ್ತು ದೇಶ ಅಭ್ಯುದಯದಲ್ಲಿ ವಿದ್ಯಾರ್ಥಿಗಳ ವೈಯಕ್ತಿಕ ತತ್ವದ ಕುರಿತು ಶಿಕ್ಷಣ ನಿರ್ದೇಶಕರು ಮಾತನಾಡಿದರು. ನಂತರ ಗಾಂಧಿ ಸ್ಮ್ರತಿ ಹಾಗೂ ವಿವಿಧ ದೇಶಭಕ್ತಿ ಗೀತೆಗಳನ್ನು ವಿದ್ಯಾರ್ಥಿಗಳು ಮತ್ತು ಕಾಲೇಜಿನ ಬೋಧಕ ಹಾಗೂ ಬೋಧಕೇತರ ವಗ೯ದವರು ನೆಲದಲ್ಲಿ ಅಸೀನರಾಗಿ 1 ಗಂಟೆಯ ವರೆಗೆ ಹಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರು ನೀಲಕಂಠ ಕಾರ್ಯಕ್ರಮವನ್ನು ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು