10:49 AM Tuesday6 - January 2026
ಬ್ರೇಕಿಂಗ್ ನ್ಯೂಸ್
ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ

ಇತ್ತೀಚಿನ ಸುದ್ದಿ

ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ಶ್ರೀ ಮಂಗಳಾಂಬೆಗೆ ರಜತ ಹಸ್ತ ಸಮರ್ಪಣೆ

03/10/2024, 22:23

ಮಂಗಳೂರು(reporterkarnataka.com):ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಸೇವೆಯನ್ನೇ ಮೂಲ ಧ್ಯೆಯವನ್ನಾಗಿಸಿಕೊಂಡು ಸ್ಥಾಪನೆಯಾದಂತಹ ಶ್ರೀ ಮಂಗಳಾದೇವಿ ಸೇವಾ ಸಮಿತಿಯ ವತಿಯಿಂದ ನವರಾತ್ರಿಯ ಆರಂಭದ ದಿನವಾದ ಇಂದು ಕ್ಷೇತ್ರದ ತಂತ್ರಿಗಳಾದ ನೀಲೇಶ್ವರ ಶ್ರೀ ಪದ್ಮನಾಭ ತಂತ್ರಿಯವರ ಸಮ್ಮುಖದಲ್ಲಿ ರಜತ ಹಸ್ತಗಳನ್ನು ಸಮರ್ಪಿಸಲಾಯಿತು. ಶ್ರೀಮಂಗಳಾದೇವಿ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿಯೂ ತನ್ನನ್ನು ತಾನು ತೊಡಗಿಸಿಕೊಂಡಿರುವಂತಹ ಶ್ರೀಮಂಗಳಾದೇವಿ ಸೇವಾ ಸಮಿತಿಯು ಕ್ಷೇತ್ರದಲ್ಲಿ ನಡೆಯುವ ನವರಾತ್ರಿ ಮಹೋತ್ಸವ ಜಾತ್ರಾ ಮಹೋತ್ಸವ ಸೇರಿದಂತೆ ಎಲ್ಲಾ ಅನ್ನ-ಸಂತರ್ಪಣೆಯ ದಿವಸಗಳಂದು ಮಾತ್ರವಲ್ಲದೆ ದೇವಸ್ಥಾನದ ಎಲ್ಲಾ ಕಾರ್ಯಕ್ರಮಗಳಲ್ಲಿ ಆತ್ಮೀಯವಾಗಿ ತೊಡಗಿಸಿಕೊಂಡಿರುತ್ತದೆ, ಮಾತ್ರವಲ್ಲದೆ ಸಂದರ್ಭನುಸಾರವಾಗಿ ಶ್ರೀ ಕ್ಷೇತ್ರದ ಅನುಕೂಲಕ್ಕೆ ಅನುಗುಣವಾಗಿ ಸದಾಕಾಲ ತಮ್ಮಿಂದ ಆಗುವ ಸೇವೆಯಲ್ಲಿ ಪಾಲ್ಗೊಂಡಿರುತ್ತದೆ.
ಸಮಿತಿಯ ಅಧ್ಯಕ್ಷರಾದ ದಿಲ್ ರಾಜ್ ಆಳ್ವ ಮಾತನಾಡಿ ನಮ್ಮ ಸಮಿತಿಯು ಅನೇಕ ವರ್ಷಗಳಿಂದ ತಾಯಿಯ ಸೇವೆಯಲ್ಲಿ ಪಾಲ್ಗೊಂಡಿದೆ. ಈ ವರ್ಷ ವಿಷೇಷವಾಗಿ ರಜತ ಹಸ್ತ ಸಮರ್ಪಣೆ ಮಾತ್ರವಲ್ಲದೆ ವಿಜಯ ದಶಮಿಯಂದು ಸಮಿತಿಯ ವತಿಯಿಂದ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ತಿಳಿಸಿದರು.
ಹಿರಿಯ ಸದಸ್ಯರಾದ ಎ. ಸೀತಾರಾಮ, ಬಿ. ಅಶೋಕ್ ಕುಮಾರ್, ಕೇಶವ , ತುಕಾರಾಮ್, ಪ್ರಧಾನ ಕಾರ್ಯದರ್ಶಿ ತಿಲಕ್ ರಾಜ್ ಕೋಶಾಧಿಕಾರಿ ವಿಶ್ವನಾಥ್, ದೇವಸ್ತಾನದ ಆಡಳಿತ ಮಂಡಳಿ ಸದಸ್ಯರು, ಅರ್ಚಕ ವೃಂದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು