10:36 PM Saturday5 - October 2024
ಬ್ರೇಕಿಂಗ್ ನ್ಯೂಸ್
ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ ಶ್ರೀನಿವಾಸಪುರ ವಿದ್ಯಾರ್ಥಿಗಳ ವಸತಿ ನಿಲಯ ದುರವಸ್ಥೆ: ಉಪ ಲೋಕಾಯುಕ್ತರು ಗರಂ; ಸರಕಾರಿ ಆಸ್ಪತ್ರೆಗೂ…

ಇತ್ತೀಚಿನ ಸುದ್ದಿ

ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ

04/10/2024, 20:42

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ನಗರಾಭಿವೃದ್ಧಿ ಇಲಾಖೆಯು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದೆ.
ಕೋಲಾರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಸೂಚಿಸಿದೆ. ಇ-ಆಸ್ತಿ ತಂತ್ರಾಂಶವನ್ನು ಕಾವೇರಿ- 2.0 ತಂತ್ರಾಂಶದೊಂದಿಗೆ ಸಂಯೋಜಿಸಿ, ಅಕ್ಟೋಬರ್ 07, 2024 ರಿಂದ ಜಾರಿಗೆ ಬರುವಂತೆ ಸರ್ಕಾರವು ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೋಲಾರ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿ ಮಾಡುವಾಗ ಉಪ-ನೋಂದಣಿ ಕಛೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.
ಕೋಲಾರ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ- ಆಸ್ತಿ, ಖಾತಾ ತಂತ್ರಾಂಶ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
ಇ-ಖಾತಾ ಸಂಯೋಜನೆ ಪ್ರಯೋಜನಗಳು ಇ-ಆಸ್ತಿ ತಂತ್ರಾಂಶದಿಂದಾಗಿ ಸ್ವತ್ತುಗಳ ನೋಂದಣಿ ವೇಳೆ ಸಾರ್ವಜನಿಕರು ಮೊಸಹೋಗುವುದನ್ನು ತಡೆಯುವುದು. ಮತ್ತು ಇ-ಖಾತಾದಿಂದ ಮಾತ್ರ ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ.
ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿ ಆಗುವುದನ್ನು ತಪ್ಪಿಸಬಹುದಾಗಿದೆ. ಹಾಗೂ ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸುವ ಉದ್ದೇಶವನ್ನು ಈ ತಂತ್ರಾಂಶ ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು