11:14 AM Saturday5 - October 2024
ಬ್ರೇಕಿಂಗ್ ನ್ಯೂಸ್
ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ ಶ್ರೀನಿವಾಸಪುರ ವಿದ್ಯಾರ್ಥಿಗಳ ವಸತಿ ನಿಲಯ ದುರವಸ್ಥೆ: ಉಪ ಲೋಕಾಯುಕ್ತರು ಗರಂ; ಸರಕಾರಿ ಆಸ್ಪತ್ರೆಗೂ…

ಇತ್ತೀಚಿನ ಸುದ್ದಿ

ಹಲವೆಡೆ ಅಕ್ರಮ ಮರಳುಗಾರಿಕೆ ಮೇಲೆ ದಾಳಿ: 46 ಲಕ್ಷ ರೂ. ಮೌಲ್ಯದ 23 ಬೋಟುಗಳ ವಶ

05/10/2024, 10:19

ಮಂಗಳೂರು(reporterkarnataka.com): ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಗಳ ಮೇಲೆ ಶುಕ್ರವಾರ ದಾಳಿ ನಡೆಸಿದ ಅಧಿಕಾರಿಗಳ ತಂಡ, 23 ಬೋಟುಗಳನ್ನು ವಶಪಡಿಸಿದೆ.


ಕಂದಾಯ, ಗಣಿ ಇಲಾಖೆ ಮತ್ತು ಪೊಲೀಸರ ಜಂಟೀ ತಂಡವು ನೇತ್ರಾವತಿ ನದಿ ತೀರದ ವಳಚ್ಚಿಲ್, ಮಾರಿಪಳ್ಳ, ಪುದು ಮತ್ತಿತರ ಕಡೆ ಬೃಹತ್ ಕಾರ್ಯಾಚರಣೆ ನಡೆಸಿ, ಅಕ್ರಮ ಮರಳುಗಾರಿಕೆಗೆ ಬಳಸುತ್ತಿದ್ದ 23 ಬೋಟುಗಳನ್ನು ವಶಪಡಿಸಿದೆ.
ಬೋಟುಗಳ ಒಟ್ಟು ಅಂದಾಜು ಮೌಲ್ಯ ರೂ. 46 ಲಕ್ಷಗಳಾಗಿದ್ದು, ಇವುಗಳನ್ನು ಸದ್ಯ ಅಡ್ಯಾರ್ ಕಟ್ಟೆ ಸಮೀಪ ತಂದಿಡಲಾಗಿದೆ.
ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ ಅವರ ಮಾರ್ಗದರ್ಶನದಲ್ಲಿ ನಡೆದ ಈ ದಾಳಿ ಕಾರ್ಯಾಚರಣೆಯಲ್ಲಿ ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಾದ ಗಿರೀಶ್ ಮೋಹನ್, ಕೃಷ್ಣವೇಣಿ, ಮಹದೇಶ್ವರ್, ಪೊಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು