12:53 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಗೋವಾ: ಅಕ್ಟೋಬರ್ 26 ಮತ್ತು 27ರಂದು ಅಖಿಲ ಭಾರತ ಕೊಂಕಣಿ ಪರಿಷದ್‌ 33ನೇ ಅಧಿವೇಶನ

07/10/2024, 12:05

ಮಂಗಳೂರು(reporterkarnataka.com): ಅಖಿಲ ಭಾರತ ಕೊಂಕಣಿ ಪರಿಷದ್‌ನ 33ನೇ ಅಧಿವೇಶನ ಗೋವಾದ ಮಡ್ಗಾಂವ್, ರವೀಂದ್ರಭವನದಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆಯಲಿದೆ.
ಈ ಎರಡು ದಿನಗಳ ಕಾರ್ಯಕ್ರಮವನ್ನು ಅಕ್ಟೋಬರ್ 26ರ ಬೆಳಗ್ಗೆ ಹಿರಿಯ ಬರಹಗಾರ ಮತ್ತು ಭಾಷಾ ವಿದ್ವಾಂಸರಾದ ಡಾ. ಗಣೇಶ ದೇವಿ ಉದ್ಘಾಟಿಸಲಿದ್ದಾರೆ‌ ಎಂದು ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಪರಿಷದಿನ ಕಾರ್ಯಾಧ್ಯಕ್ಷ ಚೇತನ್ ಅಚಾರ್ಯ ಮತ್ತು ಸ್ವಾಗತ ಸಮಿತಿಯ ಅಧ್ಯಕ್ಷ ಪ್ರಶಾಂತ್ ನಾಯಕ್ ಅವರು ತಿಳಿಸಿದರು.


ಪರಿಷದ್‌ನಲ್ಲಿ ಕೊಂಕಣಿ ಶಿಕ್ಷಣ, ಭಾಷೆಯ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಬಳಕೆ ಇತ್ಯಾದಿಗಳನ್ನು ಒಳಗೊಂಡ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಪರಿಷದಿಗೆ ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ಗೋವಾದಿಂದ ಪ್ರತಿನಿಧಿಗಳು ಹಾಜರಾಗಲಿದ್ದಾರೆ. ರೆ। ಮೌಝಿನೋ ಅತ್ತೈಡೆ ಅವರು ಪರಿಷದಿನ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದು, ಎರಡು ವರ್ಷಗಳ ಕಾಲ ಈ ಹುದ್ದೆಯನ್ನು ಹೊಂದಿರುತ್ತಾರೆ. ಕೊಂಕಣಿ ಭಾಷಾ ಮಂಡಳದ ಮಾಜಿ ಅಧ್ಯಕ್ಷ ಪ್ರಶಾಂತ್ ನಾಯಕ್ ಅವರು ಸ್ವಾಗತ ಸಮಿತಿಯ ಅಧ್ಯಕ್ಷರಾಗಿದ್ದಾರೆ ಮತ್ತು ಅನಂತ ಅಗ್ನಿ, ಮಂಗಲ್‌ದಾಸ್ ಭಟ್ ಅವರು ಸಂಘಟನಾ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿದ್ದಾರೆ.
ಪರಿಷ್ ನ ಕಾರ್ಯಾಧ್ಯಕ್ಷ ಚೇತನ್ ಅಚಾರ್ಯ, ಪ್ರಶಾಂತ್ ನಾಯಕ್ ಮತ್ತು ಸುದೀನ್ ಲೊಲಿಯೇಕರ್ ಅವರನ್ನು ಒಳಗೊಂಡ ಪ್ರತಿನಿಧಿಗಳು ಪರಿಷದಿಗೆ ಪ್ರತಿನಿಧಿಗಳನ್ನು ಆರಿಸುವ ಸಲುವಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
1939ರಲ್ಲಿ ಸ್ವರ್ಗೀಯ ಮಾಧವ ಮಂಜುನಾಥ ಶಾನುಭಾಗ್ ಅವರು ಸ್ಥಾಪಿಸಿದ ಪರಿಷದ್ ಕೊಂಕಣಿ ಭಾಷೆ ಮತ್ತು ಅದರ ಜನರ ಅಭಿವೃದ್ಧಿಯತ್ತ ಕಾರ್ಯನಿರ್ವಹಿಸುತ್ತಿದೆ. ಆಯೋಜಕರು ಕರ್ನಾಟಕದ ಕೊಂಕಣಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪರಿಷದಿಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಶಾಂತ್ ನಾಯಕ್ ( ಅಧ್ಯಕ್ಷರು, ಸ್ವಾಗತ ಸಮಿತಿ, ಅಖಿಲ ಭಾರತ ಕೊಂಕಣಿ ಪರಿಷದ್),ಚೇತನ್ ಅಚಾರ್ಯ (ಕಾರ್ಯಾಧ್ಯಕ್ಷರು, ಅಖಿಲ ಭಾರತ ಕೊಂಕಣಿ ಪರಿಷದ್),ಡಾ| ಕಸ್ತೂರಿ ಮೋಹನ್ ಪೈ , ಎಚ್. ಎಮ್. ಪರ‍್ನಾಲ್ , ಟೈಟಸ್ ನೊರೊನ್ಹಾ , ಮೆಲ್ವಿನ್ ರೊಡ್ರಿಗಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು