3:32 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನೈಜಿರಿಯಾ ಪ್ರಜೆಯ ಸೆರೆ; 6 ಕೋಟಿ ಮೌಲ್ಯದ 6.310 ಕೆಜಿ ಎಂಡಿಎಂಎ ವಶ

07/10/2024, 21:25

ಮಂಗಳೂರು(reporter Karnataka.com):“ಡ್ರಗ್ಸ್ ಫ್ರಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜಿರಿಯಾ ದೇಶದ ವಿದೇಶಿ ಪ್ರಜೆಯೋರ್ವನನ್ನು ದಸ್ತಗಿರಿ ಮಾಡಿ ರೂ. 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
*ಪ್ರಕರಣದ ವಿವರ:* 29-09-2024 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಾಳಿ ನಡೆಸಿ ಮಾದಕ ವಸ್ತುವನ್ನು ಹೊಂದಿದ್ದ
1.ಹೈದರ್ @ ಹೈದರ್ ಆಲಿ(51), ವಾಸ: ಚೆಂಬುಗುಡ್ಡೆ ಹೌಸ್, ಪೆರ್ಮನೂರು ಪೋಸ್ಟ್, ತೊಕ್ಕೊಟ್ಟು, ಮಂಗಳೂರು ಎಂಬಾತನನ್ನು ದಸ್ತಗಿರಿ ಮಾಡಿ ಆತನ ವಶದಿಂದ ರೂ. 75,000/- ಮೌಲ್ಯದ 15 ಗ್ರಾಂ ಮಾದಕ ವಸ್ತು ಎಂಡಿಎಂಎ ನ್ನು ಸ್ವಾಧೀನಪಡಿಸಿಕೊಂಡು ಆತನ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಮುಂದಿನ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ಹಸ್ತಾಂತರಿಸಲಾಗಿತ್ತು.
ಈ ಪ್ರಕರಣದಲ್ಲಿ ಮಾದಕ ವಸ್ತುವನ್ನು ಪೂರೈಕೆ ಮಾಡುವ ಡ್ರಗ್ಸ್ ಪೆಡ್ಲರ್ ಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆಯನ್ನು ಮುಂದುವರಿಸಿ ತನಿಖೆಯನ್ನು ಕೈಗೊಂಡ ಸಮಯ ಆರೋಪಿ ಹೈದರ್ @ ಹೈದರ್ ಆಲಿಗೆ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಇನ್ನಿತರ ಡ್ರಗ್ ಪೆಡ್ಲರ್ ಗಳ ಮಾಹಿತಿ ಸಂಗ್ರಹಿಸಿ ಚಾಕಚಾಕ್ಯತೆಯಿಂದ, ತಾಂತ್ರಿಕ ಸಹಾಯದಿಂದ ಹಾಗೂ ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು ಮಾದಕ ವಸ್ತುವನ್ನು ಪೂರೈಕೆ ಮಾಡುವ ವ್ಯಕ್ತಿಯು ಬೆಂಗಳೂರಿನಲ್ಲಿ ವಾಸ್ತವ್ಯವಿರುವ ನೈಜೇರಿಯಾ ದೇಶದ ವಿದೇಶಿ ಪ್ರಜೆ ಎಂದು ತಿಳಿದುಬಂದಂತೆ ಬೆಂಗಳೂರು ನಗರದ ದೊಮ್ಮ ಸಂದ್ರ ಗ್ರಾಮ ಸ್ವಾಮಿ ವಿವೇಕಾನಂದ ನಗರದ ಸಾಯಿಮಿಡೋ ಪೇಸ್ -2 ಗೋವಿಂದ ರೆಡ್ಡಿ ಲೇ ಔಟ್ ನ ಬಾಡಿಗೆ ಮನೆಗೆ ದಾಳಿ ನಡೆಸಿ ಮಾದಕ ವಸ್ತುವನ್ನು ಹೊಂದಿದ್ದ ನೈಜೀರಿಯಾದ ಪೀಟರ್
ಅಕೆಡಿ ಬೆಲನಸೆರೆ; ಎಂಬಾತನನ್ನು ಪತ್ತೆ ಹಚ್ಚಿ ಆತನ ಮನೆಯಲ್ಲಿ ದಾಸ್ತಾನು ಇರಿಸಿದ್ದ ಒಟ್ಟು 6 ಕೋಟಿ ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್ ಫೋನುಗಳು, ಡಿಜಿಟಲ್ ತೂಕ ಮಾಪಕ, ಒಟ್ಟು 35 ಎಟಿಎಂ/ಡೆಬಿಟ್ ಕಾರ್ಡ್ ಗಳು, 17 ಇನ್ ಅಕ್ಟಿವ್ ಸಿಮ್ ಕಾರ್ಡ್ ಗಳು, 10 ವಿವಿಧ ಬ್ಯಾಂಕ್ ಗಳ ಬ್ಯಾಂಕ್ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ.. 6,00,63,500/-ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿ ಪೀಟರ್ ಅಕೆಡಿ ಬೆಲನೋವು ಎಂಬಾತನ ವಿರುದ್ಧ ಈ ಹಿಂದೆ ಬೆಂಗಳೂರಿನ ವಿದ್ಯಾರಣ್ಯಾಪುರ ಪೊಲೀಸ್ ಠಾಣೆಯಲ್ಲಿ 2023 ನೇ ಇಸವಿಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ. ಈತನು ಬೆಂಗಳೂರು ನಗರ ಹಾಗೂ ರಾಜ್ಯದ ವಿವಿಧ ಕಡೆಗಳಿಗೆ ಅಲ್ಲದೇ ಕೇರಳ ರಾಜ್ಯಕ್ಕೆ ಕೂಡಾ ಮಾದಕ ವಸ್ತುವನ್ನು ಪೂರೈಕೆ ಮಾಡುತ್ತಿದ್ದನು. ಈ ಮಾದಕ ವಸ್ತು ದಂಧೆ ಪ್ರಕರಣದಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯ ಮುಂದುವರಿಯುವುದು.


ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯವನ್ನು ಮಾನ್ಯ ಪೊಲೀಸ್ ಆಯುಕ್ತರಾದ ಶ್ರೀ ಅನುಪಮ್ ಅಗ್ರವಾಲ್ IPS ರವರ ಮಾರ್ಗದರ್ಶನದಲ್ಲಿ, ಉಪ ಪೊಲೀಸ್ ಆಯುಕ್ತರು( ಕಾನೂನು & ಸುವ್ಯವಸ್ಥೆ ವಿಭಾಗ) ರವರಾದ ಶ್ರೀ ಸಿದ್ದಾರ್ಥ ಗೋಯಲ್, IPS ಮತ್ತು ಉಪ ಪೊಲೀಸ್ ಆಯುಕ್ತರು (ಅಪರಾಧ ಮತ್ತು ಸಂಚಾರ ವಿಭಾಗ) ರವರಾದ ಶ್ರೀ ಬಿ ಪಿ ದಿನೇಶ್ ಕುಮಾರ್, KSPS ರವರ ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಸುದೀಪ್ ಎಂ.ವಿ, ಶರಣಪ್ಪ ಭಂಡಾರಿ, ನರೇಂದ್ರ, ಎಎಸ್ಐ ಯವರಾದ ಮೋಹನ್ ಕೆ ವಿ, ರಾಮ ಪೂಜಾರಿ, ಶೀನಪ್ಪ, ಸುಜನ್ ಶೆಟ್ಟಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು