3:38 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕಿಮ್ಸ್ ಯು.ಜಿ.ಮೆಡಿಕ್ವಿಜ್ ; ಕೆಎಂಸಿ ಮಣಿಪಾಲ ಕಾಲೇಜ್‌ಗೆ ಪ್ರಶಸ್ತಿ

08/10/2024, 13:32

ಮಂಗಳೂರು(Reporterkarnataka.com) :
ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳು ವಿವಿಧ. ನಿಯತಕಾಲಿಕ ಶೈಕ್ಷಣಿಕ ಸ್ಪರ್ಧಾಕೂಟದಲ್ಲಿ ಪಾಲ್ಗೊಂಡು ತಮ್ಮ ಜ್ಞಾನವನ್ನು ವೃದ್ಧಿಸಿದರೆ ಭವಿಷ್ಯದ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು. ಶೈಕ್ಷಣಿಕ ಸ್ಪರ್ಧಾಕೂಟದಲ್ಲಿ ಭಾಗವಹಿಸಲು ಪ್ರಥಮ ಆದ್ಯತೆ ಮತ್ತು ಗುರಿಯಿಟ್ಟುಕೊಂಡು ಸೋಲು ಗೆಲವು ದ್ವಿತೀಯ ಉದ್ದೇಶವಾಗಿರಬೇಕು ಎಂದು ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಹಾಜಿ ಯು.ಕೆ. ಮೋನು ಸಲಹೆ ನೀಡಿದರು.

ಅವರು ಕಣಚೂರು ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯದ ವೈದ್ಯಕೀಯ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ವೈದ್ಯಕೀಯ ಶಾಸ್ತ್ರ ವಿಭಾಗದ ಪದವಿ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳಿಗಾಗಿ ನಡೆದ 4ನೇ ವಾರ್ಷಿಕ ರಾಜ್ಯ ಮಟ್ಟದ ಅಂತರ ವೈದ್ಯಕೀಯ ಕಾಲೇಜು ರಸ ಪ್ರಶ್ನೆ ಸ್ಪರ್ಧಾಕೂಟ ಕಿಮ್ಸ್ ಯು.ಜಿ.ಮೆಡಿಕ್ವಿಜ್ 2024 ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಈ ಸ್ಪರ್ಧಾ ಕೂಟದಲ್ಲಿ ಮಣಿಪಾಲ ವೈದ್ಯಕೀಯ ಕಾಲೇಜನ್ನು ಪ್ರತಿನಿಧಿಸಿದ ರಾಘವ ಮತ್ತು ಅನಿರುಧ್ ರಾವ್ ಜೋಡಿ ಪ್ರಥಮ ಸ್ಥಾನ ಗಳಿಸಿ ಪ್ರತಿಷ್ಠಿತ ಕಿಮ್ಸ್ ಯು.ಜಿ.ಮೆಡಿಕ್ವಿಜ್ 2024 ಪ್ರಶಸ್ತಿ ಪಡೆಯಿತು. ಕೆ.ಎಂ.ಸಿ. ಮಣಿಪಾಲ ಕಾಲೇಜನ್ನು ಪ್ರತಿನಿಧಿಸಿದ ಸಿದ್ದಾರ್ಥನಂದ ಮತ್ತು ಆದರ್ಶ ಜೋಡಿ ದ್ವಿತೀಯ ಸ್ಥಾನ ಗಳಿಸಿತು.
ವೇದಿಕೆಯಲ್ಲಿ ಪ್ರಾಂಶುಪಾಲ ಡಾ.ಶಹನವಾಜ್ ಮಣಿಪ್ಪಾಡಿ, ಮುಖ್ಯ ಆಡಳಿತಾಧಿಕಾರಿ ಡಾ.ರೋಹನ್ ಮೋನಿಸ್. ಕಣಚೂರು ವೈದ್ಯಕೀಯ ಸಲಹಾ ಸಮಿತಿಯ ಅಧ್ಯಕ್ಷರಾದ ಡಾ.ಮೊಹಮ್ಮದ್ ಇಸ್ಮಾಯಿಲ್ ಮತ್ತು ಸದಸ್ಯರಾದ ಡಾ.ಎಂ.ವಿ.ಪ್ರಭು ಉಪಸ್ಥಿತರಿದ್ದರು. ಡಾ.ದೇವದಾಸ್ ರೈ ಸ್ವಾಗತಿಸಿದರು. ಡಾ.ಸನಿನ್ ವಂದಿಸಿದರು. ಡಾ. ಪ್ರೀತಮ್ ಸ್ಪರ್ಧಾಕೂಟವನ್ನು ಸಂಘಟಿಸಿದ್ದರು. ಎಂ.ವಿ. ಮಲ್ಯ ಬಹುಮಾನಗಳನ್ನು ಪ್ರಾಯೋಜಿಸಿದ್ದರು.

ವೈದ್ಯಕೀಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ.ಡಾ. ದೇವದಾಸ್ ರೈ ರವರು ಸ್ಪರ್ಧಾಕೂಟವನ್ನು ನಿರೂಪಿಸಿದರು. ಅವಿಭಾಜಿತ ದ.ಕ. ಜಿಲ್ಲೆಯ ವಿವಿಧ ವೈದ್ಯಕೀಯ ಶಿಕ್ಷಣ ಕಾಲೇಜಿನ 60 ತಂಡಗಳು ನಿರ್ಣಾಯಕ ಮತ್ತು ಅಂತಿಮ ಸುತ್ತಿಗೆ ಪ್ರವೇಶ ಪಡೆದಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು