ಇತ್ತೀಚಿನ ಸುದ್ದಿ
ಮಾಜಿ ಶಾಸಕರ ಸಹೋದರ ಮುಲ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಮೇಲ್ಕಾರಿನಲ್ಲಿ ಇಬ್ಬರು ಆರೋಪಿಗಳ ಬಂಧನ
08/10/2024, 22:37

ಮಂಗಳೂರು(reporterkarnataka.com): ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ಸಹೋದರ ಬಿ.ಎಂ. ಮುಲ್ತಾಜ್ ಅಲಿ ಕೂಳೂರು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ರೆಹಮತ್ ಮತ್ತು ಶೋಯಬ್ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳನ್ನು ಬಂಟ್ವಾಳದ ಮೆಲ್ಕಾರ್ ಬಳಿ ಪತ್ತೆ ಹಚ್ಚಿ ಕಾವೂರು ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಮುಲ್ತಾಜ್ ಅಲಿ ಅವರು ಕೂಳೂರು ಸೇತುವೆ ಬಳಿ ಕಾರನ್ನು ನಿಲ್ಲಿಸಿ ಆರೋಪಿಗಳ ಪ್ರಚೋದನೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿರುತ್ತಾರೆ ಎಂದು ದೂರು ದಾಖಲಾಗಿದೆ.
ಆರೋಪಿಗಳನ್ನು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಈ ಕಾರ್ಯಾಚರಣೆಯನ್ನು ಡಿ.ಸಿ.ಪಿಗಳಾದ ಸಿದ್ದಾರ್ಥ್ ಗೋಯಲ್, ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀಕಾಂತ್ ರವರ ನೇತೃತ್ವದಲ್ಲಿ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ರಾಘವೇಂದ್ರ ಎಮ್. ಬೈಂದೂರು, ಉಪ ನಿರೀಕ್ಷಕರುಗಳಾದ ಮಲ್ಲಿಕಾರ್ಜುನ ಬಿರಾದಾರ,
ನಳಿನಿ ಹಾಗೂ ಸಿಬ್ಬಂಧಿಯವರಾದ ನಾಗರತ್ನ,ಸಿ, ಪ್ರವೀಣ್ ಅವರು ಕಾರ್ಯಾಚರಣೆ ನಡೆಸಿದ್ದರು.