8:12 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಗಂಜಿಮಠ ಶಾಖೆಯಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

09/10/2024, 13:16

ಮಂಗಳೂರು(reporterkarnataka.com):ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಗಂಜಿಮಠ ಶಾಖೆಯ ಪ್ರಯುಕ್ತ ಮರಾಠಿ ಸಮಾಜ ಸೇವಾ ಸಂಘ ಗಂಜಿಮಠ , ಅಳಿಕೆ ಫ್ರೆಂಡ್ಸ್ ಗಂಜಿಮಠ , ಫ್ರೆಂಡ್ಸ್ ಕ್ಲಬ್ ಮಟ್ಟಿ ಬಡಗುಳಿಪಾಡಿ, ಕಲಾವರ್ಧಕ ಯುವಕ ಮಂಡಲ ನಾರ್ಲ ಮೊಗರು ಹಾಗೂ ಲಯನ್ಸ್ ಕ್ಲಬ್ ಗುರುಪುರ ಕೈಕಂಬ ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ, ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯರ ತಂಡದೊಂದಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಶಿಬಿರವು ಮರಾಠಿ ಸಮಾಜ ಸೇವಾ ಸಂಘ (ರಿ.) ಗಂಜಿಮಠ ಇಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಗುರುಪುರ ಕೈಕಂಬ ಇದರ ಅಧ್ಯಕ್ಷ ಮಹೇಶ್ ಶೆಟ್ಟಿ ಅವರು ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವಿವಿಧ ಸಂಘ ಸಂಸ್ಥೆಗಳೂಂದಿಗೆ ಸೇರಿ ನಡೆಸುವ ಜನಪರ ಕಾರ್ಯಕ್ರಮವು ಶ್ಲಾಘನೀಯ, ಆರೋಗ್ಯವೇ ಭಾಗ್ಯ ಎಂಬಂತೆ, ಮನುಷ್ಯನ ಆರೋಗ್ಯ, ಹಿತವಾದ ಜೀವನ ಶೈಲಿಯಲ್ಲಿ ಸಮಾಜಕ್ಕೆ ಸೇವೆಯನ್ನು ನೀಡುವಂತಾಗಲಿ, ಈ ಶಿಬಿರದ ಸದುಪಯೋಗವನ್ನು ಪಡೆಯುವಂತೆ ತಿಳಿಸಿದರು.
ಈ ಕಾರ್ಯಕ್ರಮದ ಇನ್ನೊರ್ವ ಅತಿಥಿಯಾದ ಉದ್ಯಮಿ ಚಂದ್ರಹಾಸ್ ನಾರ್ಲ ಅವರು ಮಾತನಾಡಿ ನಮ್ಮ ಊರಿನಲ್ಲಿ ವೈದ್ಯಕೀಯ ಶಿಬಿರದ ಅವಶ್ಯಕತೆ ಇತ್ತು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ವೈದ್ಯಕೀಯ ಶಿಬಿರವನ್ನು ಆಯೋಜಿಸಿದ್ದು ಇನ್ನೊ ಮುಂದಕ್ಕೂ ಇಂತಹ ಶಿಬಿರವನ್ನು ಆಯೋಜಿಸುವಂತಾಗಲಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಗಳು ೧೦೦ , ೨೦೦ ರ ಗಡಿಯನ್ನು ದಾಟಿ, ಶಾಖೆಯು ರಾಜ್ಯ, ರಾಷ್ಟç ಮಟ್ಟದಲ್ಲಿ ಬೆಳಗಲಿ ಎಂದು ಹಾರೈಸಿದರು.
ಮರಾಠಿ ಸಮಾಜ ಸೇವಾ ಸಂಘ ಗಂಜಿಮಠ ಅಧ್ಯಕ್ಷರಾದ ಶೇಖರ್ ಕಡ್ತಲೆ ಅವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಆತ್ಮಪೂರ್ವಕವಾಗಿ ಕೆಲಸ ಮಾಡುತ್ತದೆ ಎಂಬುವುದಕ್ಕೆ ಈ ಶಿಬಿರ ಒಂದು ನಿದರ್ಶನ. ಆತ್ಮಶಕ್ತಿ ಎಂಬ ಹೆಸರನ್ನು ಇಟ್ಟುಕೊಂಡು ನವದುರ್ಗೆಯರನ್ನು ಪೂಜಿಸುವ ಈ ಸಂದರ್ಭದಲ್ಲಿ ದೇವರ ಕೃಪೆ ಜೊತೆಗೆ ಜನರಿಗೆ ಒಂದು ಒಳ್ಳೆಯ ಬದುಕನ್ನು ಕೊಡಬೇಕೆನ್ನುವ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದೆ. ಇದು ನಿಜವಾದ ದೇವರು ಮೆಚ್ಚುವಂತ ಕೆಲಸ, ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಆಶಯದಂತೆ ಬಡ ಜನರಿಗೆ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜನೆ ಮಾಡುತ್ತಾ ಬರುತ್ತಿದ್ದಾರೆ ಎಂದು ಹೇಳಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಈ ನಿಟ್ಟಿನಲ್ಲಿ ಬ್ಯಾಂಕಿಂಗ್ ಸೇವೆಯೇ ಮುಖ್ಯ ಧ್ಯೇಯದೊಂದಿಗೆ
ನಿರಂತರವಾಗಿ ೭೪ ಶಿಬಿರವನ್ನು ಆಯೋಜಿಸಿದ್ದು, ಇಂದಿನ ೭೫ ನೇ ಶಿಬಿರವಾಗಿದ್ದು, ಸಂಘವು .ಬ್ಯಾಂಕಿಂಗ್ ಸೇವೆಯು ಜನರಿಗೆ ತುಂಬಾ ಹತ್ತಿರವಾಗುವ ನಿಟ್ಟಿನಲ್ಲಿ ಠೇವಣಿಗೆ ಆಕರ್ಷಕ ಬಡ್ಡಿದರ ಶೇ. ೧೦ ರ ಜೊತೆಯಲ್ಲಿ, ಚಿನ್ನಾಭರಣ ಸಾಲಕ್ಕೆ ಗರಿಷ್ಟ ಮೌಲ್ಯದ ಜೊತೆಗೆ ಸೇವಾ ಶುಲ್ಕ ರಹಿತವಾಗಿ ನೀಡುತ್ತಿರುವುದು, ಇದು ಸಂಘದ ಸಮಾಜ ಮುಖಿ ಚಿಂತನೆಯಾಗಿದೆ. ರಜಾ ದಿನಗಳಲ್ಲಿ ಅಯೋಜಿಸುವ ಶಿಬಿರಗಳಲ್ಲಿ ನಮ್ಮೊಂದಿಗೆ ವೈದ್ಯಕೀಯ ಶಿಬಿರದ ಸಿಬ್ಬಂದಿಗಳು ಹಾಗೂ ನಮ್ಮ ಸಂಘದ ಸಿಬ್ಬಂದಿಗಳು ಹಾಗೂ ಸಂಘ ಸಂಸ್ಥೆಗಳ ಪಧಾಧಿಕಾರಿಗಳು ನಮ್ಮೊಂದಿಗೆ ಭಾಗವಹಿಸುವುದು ತುಂಬಾ ಹೆಮ್ಮ ಆಗುತ್ತದೆ. ಸಂಘವು ೧೫,೭೦೦ ಮಿಕ್ಕಿ ಶಿಬಿರಾರ್ಥಿಗಳಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಿದೆ. ಅಲ್ಲದೇ ೫೩೦ ಮಿಕ್ಕಿ ಶಿಬಿರಾರ್ಥಿಗಳಿಗೆ ಉಚಿತ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ಆಸ್ಪತ್ರೆಗಳ ಸಹಯೋಗದೊಂದಿಗೆ ಮಾಡಿಸಿದೆ. ಈ ಕಾರ್ಯಕ್ರಮವು ಬಡವರ್ಗದ ಜನರಿಗೆ ಮಾತ್ರವಲ್ಲದೇ ಶ್ರೀಮಂತ ವರ್ಗದ ಜನರಿಗೂ ಕೂಡ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ, ಹಾಗೂ ಸಮುದಾಯ ದಂತ ವಿಭಾಗ ,ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿವರ್ಗದವರಿಗೂ ಕ್ರತಜ್ನತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ ಗೋಪಾಲ್ ಎಮ್ , ಫ್ರೆಂಡ್ಸ್ ಕ್ಲಬ್ ಮಟ್ಟಿ ಬಡಗುಳಿಪಾಡಿ ಅಧ್ಯಕ್ಷರಾದ ಸೋಹನ್ ಅತಿಕಾರಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು