ಇತ್ತೀಚಿನ ಸುದ್ದಿ
ಉದ್ಯಮ ಕ್ಷೇತ್ರದ ದಿಗ್ಗಜ, ಕೈಗಾರಿಕೋದ್ಯಮಿ ರತನ್ ಟಾಟಾ ಇನ್ನಿಲ್ಲ: ಪ್ರಧಾನಿ ಮೋದಿ ಸಹಿತ ಹಲವು ಗಣ್ಯರ ಸಂತಾಪ
10/10/2024, 09:09

ಮುಂಬೈ(reporterkarnataka.com): ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ತಡರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದರು. ಟಾಟಾ ಗ್ರೂಪ್‌ನ ಎಮೆರಿಟಸ್ ಅಧ್ಯಕ್ಷರಾದ ಅವರಗೆ 86 ವರ್ಷ ವಯಸ್ಸಾಗಿತ್ತು.
ವಯೋಸಹಜ ಕಾಯಿಲೆ ಮತ್ತು ಅವರ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಟಾಟಾ ಅವರನ್ನು ಸೋಮವಾರ (ಅ. 7) ದಕ್ಷಿಣ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಯಿತ್ತು.
ಟಾಟಾ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರನ್ನು ದೂರದೃಷ್ಟಿಯ ವ್ಯಾಪಾರ ನಾಯಕ, ಸಹಾನುಭೂತಿಯ ಆತ್ಮ ಮತ್ತು ಅಸಾಧಾರಣ ಮನುಷ್ಯ ಎಂದು ಪ್ರಧಾನಿ ಮೋದಿ ಅವರು ಬಣ್ಣಿಸಿದ್ದಾರೆ.
ಭಾರತದ ಉದ್ಯಮದ ದಿಗ್ಗಜ ಮತ್ತು ಲೋಕೋಪಕಾರಿ ಪದ್ಮವಿಭೂಷಣ ರತನ್ ಟಾಟಾ ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ಕಾಂಗ್ರೆಸ್ ಹೇಳಿಕೆಯೊಂದರಲ್ಲಿ ತಿಳಿಸಿದೆ.