ಇತ್ತೀಚಿನ ಸುದ್ದಿ
ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆ ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿಗೆ ಸನ್ಮಾನ
12/10/2024, 12:16

ಮಂಗಳೂರು(reporterkarnataka.com): ನಗರದ ಬೋಳಾರ ಹಳೇಕೋಟೆ ಮಾರಿಯಮ್ಮ ದೇವಸ್ಥಾನದ ನವರಾತ್ರಿ ಮಹೋತ್ಸವದ ಸಂದರ್ಭ ಶ್ರೀ ಕ್ಷೇತ್ರದ ತೀರ್ಥಕೆರೆ ಗುಜ್ಜರಕೆರೆ ಸಂರಕ್ಷಣಾ ಕಾರ್ಯದಲ್ಲಿ ಪ್ರಮುಖ ಪಾತ್ರ ವಹಿಸಿರುವ ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿ ಗುಜ್ಜರಕೆರೆ ಅವರನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಬಿ. ಗೌರವಿಸಿದರು.
ಈ ಸಂದರ್ಭ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕೇಶವ ಶೆಟ್ಟಿ ಕದ್ರಿ, ರಮಣಿ ಅಂಚನ್,99ಗಂಗಾಧರ್ ಕೋಟ್ಯಾನ್ ಉಪಸ್ಥಿತರಿದ್ದರು.