2:35 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ಕಡೇ ದಿನ ಮನರಂಜಿಸಿದ ನಗರ ಭಜನೆ, ಡೊಳ್ಳು ಕುಣಿತ

13/10/2024, 11:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ಸೀತಾರಾಮ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಕೊನೆಯ ದಿನ ಸಂಭ್ರಮದ ನಗರ ಭಜನೆ ನಡೆಯಿತು.
ವಿಶೇಷ ರಂಗೋಲಿ ಜನರ ಗಮನ ಸೆಳೆಯಿತು. ಸಂಜೆ ಮಳೆಯ ನಡುವೆಯೂ ಭಕ್ತರು ನಗರ ಭಜನೆ ನಡೆಸಿದರು. ಭಜನಾ ಕುಣಿತ,ಕೊಟ್ಟಿಗೆಹಾರದ ರಾಜಬೀದಿಯಲ್ಲಿ ಡೊಳ್ಳು ಕುಣಿತ ಜೊತೆಗೆ ಭಕ್ತರು ಮೆರವಣಿಗೆ ನಡೆಸಿದರು. ರಸ್ತೆಯಲ್ಲಿ ಆಕರ್ಷಕ ನೃತ್ಯ ಮನಸೂರೆಗೊಂಡಿತು. ಬಳಿಕ ಅತ್ತಿಗೆರೆಯ ದೇವಸ್ಥಾನ ತನಕ ಮೆರವಣಿಗೆ ಸಾಗಿ ಸೋಮೇಶ್ವರ ದರ್ಶನ ಪಡೆದರು.ಸಂಜೆ ಕೆಲ್ಲೂರು ಕೊಲ್ಲಿ ಭಜನಾ ಮಂಡಳಿಯಿಂದ ಭಜನ ಕುಣಿತ,ನಿಸಾನಿ ಮೇಳದೊಂದಿಗೆ ದೇವಸ್ಥಾನಕ್ಕೆ ತೆರಳಿ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಲಘು ಉಪಾಹಾರದೊಂದಿಗೆ ನವರಾತ್ರಿ ಉತ್ಸವಕ್ಕೆ ಅಂತಿಮ ತೆರೆ ಎಳೆಯಲಾಯಿತು.


ಬಣಕಲ್: ಬಣಕಲ್ ನಲ್ಲಿ ಇದೇ ಮೊದಲ ಬಾರಿಗೆ ದಸರಾ ಉತ್ಸವ ನಡೆಸಲಾಯಿತು. ಶ್ರೀಮಹಾಮ್ಮಾಯಿ ದೇವಸ್ಥಾನದಲ್ಲಿ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶಾರದಾ ಮೂರ್ತಿಯನ್ನು ಶನಿವಾರ ನವರಾತ್ರಿ ಉತ್ಸವದ ಕೊನೆಯ ದಿನದಂದು ವಿವಿಧ ವಾದ್ಯ ತಂಡಗಳ ಜೊತೆಗೆ ಕುಣಿತ ಭಜನೆಯೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು