9:51 AM Wednesday16 - July 2025
ಬ್ರೇಕಿಂಗ್ ನ್ಯೂಸ್
ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ…

ಇತ್ತೀಚಿನ ಸುದ್ದಿ

ರಾಜ್ಯದ 3 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆ: ನವೆಂಬರ್ 13ರಂದು ಮತದಾನ; 23ರಂದು ಫಲಿತಾಂಶ

15/10/2024, 22:03

ಹೊಸದಿಲ್ಲಿ(reporterkarnataka.com): ಕೇಂದ್ರ ಚುನಾವಣಾ ಆಯೋಗ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣಾ ದಿನಾಂಕ ಇಂದು ಘೋಷಿಸಿದ್ದು,ನವೆಂಬರ್ 13ರಂದು ಮತದಾನ ನಡೆಯಲಿದೆ.
ಬಳ್ಳಾರಿ ಜಿಲ್ಲೆಯ ಸಂಡೂರು,ಹಾವೇರಿ ಜಿಲ್ಲೆಯ ಶಿಗ್ಗಾಂವಿ ಹಾಗೂ ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ನ.23ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಚನ್ನಪಟ್ಟಣ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಶಿಗ್ಗಾಂವಿ ಈ.ತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಮೂವರು ಸಂಸದರಾಗಿ ಆಯ್ಕೆಯಾದ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಡೆಯುತ್ತಿದೆ.
ದೇಶಾದ್ಯಂತ ಒಟ್ಟು 47 ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣಾ ವೇಳಾಪಟ್ಟಿಯನ್ನೂ ಆಯೋಗ ಪ್ರಕಟಿಸಿದೆ.
ಅಕ್ಟೋಬರ್ 18ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಿಸಲಾಗುತ್ತದೆ. ನಾಮಪತ್ರ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ. ನಾಮಪತ್ರ ಹಿಂಪಡೆಯಲು ಕೊನೆಯ ದಿನ ಅಕ್ಟೋಬರ್ 30 ಎಂದು ಆಯೋಗ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು