5:33 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಂಜನಗೂಡು: ನಾಳೆ ವಾಲ್ಮೀಕಿ ಜಯಂತಿ ಆಚರಣೆ: ಜಾನಪದ ಕಲಾತಂಡಗಳೊಂದಿಗೆ ಮಹರ್ಷಿ ಭಾವಚಿತ್ರದ ಮೆರವಣಿಗೆ

16/10/2024, 14:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ನಾಯಕರ ಸಂಘದ ವತಿಯಿಂದ ನಾಳೆ ಅಕ್ಟೋಬರ್ 17ರಂದು ನಂಜನಗೂಡಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಎಂದು ಸಂಘದ ಗೌರವಾಧ್ಯಕ್ಷ ಹರತಲೆ ಚಿಕ್ಕರಂಗ ನಾಯಕ ಹೇಳಿದರು.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ನಾಳೆ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಿಂದ ವಿವಿಧ ಜಾನಪದ ಕಲಾತಂಡಗಳೊಂದಿಗೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಗಳನ್ನು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುತ್ತದೆ.ಮಧ್ಯಾಹ್ನ 1:೦೦ ಗಂಟೆಗೆ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮಕ್ಕೆ ಜಿಲ್ಲಾ ಜಿಲ್ಲಾ ಉಸ್ತುವಾರಿ ಸಚಿವ ಎಚ್. ಸಿ. ಮಹದೇವಪ್ಪ, ಸಂಸದ ಸುನಿಲ್ ಬೋಸ್, ಶಾಸಕರುಗಳಾದ ದರ್ಶನ್ ಧ್ರುವನಾರಾಯಣ್ ಹಾಗೂ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.


ಹಾಗಾಗಿ ನಮ್ಮ ಸಮಾಜವು ಸೇರಿದಂತೆ ಎಲ್ಲಾ ಸಮಾಜದ ಬಂಧುಗಳು ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.
ಇದೇ ಸಂದರ್ಭ ಕಳೆದ ಮೂರ್ನಾಲ್ಕು ವರ್ಷಗಳ ಹಿಂದೆ ಇದೇ ವಾಲ್ಮೀಕಿ ಜಯಂತಿಯಲ್ಲಿ ಕಹಿ ಘಟನೆ ಒಂದು ನಡೆದು ನಮ್ಮ ಕೆಲವು ಯುವಕರು ಹಾಗೂ ಮುಖಂಡರ ಮೇಲೆ ಪೊಲೀಸ್ ಕೇಸ್ ಹಾಕಲಾಗಿತ್ತು. ಆ ವಿಚಾರವಾಗಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಗಮನಕ್ಕೆ ತಂದಾಗ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಜೊತೆ ಮಾತನಾಡಿ ಕೇಸ್ ವಾಪಸ್ ತೆಗೆಯಲು ಸಹಕರಿಸಿದ್ದಾರೆ ಅವರಿಗೆ ನಮ್ಮ ಸಂಘ ಹಾಗೂ ಸಮಾಜದ ವತಿಯಿಂದ ಕೃತಜ್ಞತೆ ಸಲ್ಲಿಸುವುದಾಗಿ ಮುಖಂಡರಾದ ಚಿಕ್ಕರಂಗನಾಯಕ ಹಾಗೂ ದೊರೆಸ್ವಾಮಿನಾಯಕ ತಿಳಿಸಿದರು.
ಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ನಾಗೇಂದ್ರ, ಉಪಾಧ್ಯಕ್ಷ ಚಂದ್ರು, ಖಜಾಂಚಿ ರಂಗಸ್ವಾಮಿ ಸೇರಿದಂತೆ ಮುಖಂಡರುಗಳಾದ ಶಿವಣ್ಣ ಶ್ರೀಕಂಠನಾಯಕ, ಕುಮಾರ್, ಪುಟ್ಟರಾಜ ನಾಯಕ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು