1:35 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಹಲ್ಲೆಗೊಳಗಾಗಿ ಬಜರಂಗದಳ ಮುಖಂಡನನ್ನು ಆಸ್ಪತ್ರೆಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಭೇಟಿ

17/10/2024, 20:36

ಮಂಗಳೂರು(reporterkarnataka.com):ಪೊಲೀಸ್ ಠಾಣೆಯಲ್ಲಿಯೇ ದುಷ್ಕರ್ಮಿಯಿಂದ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಬಜರಂಗದಳ ಮುಖಂಡನನ್ನು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ ಮಾಡಿ ಧೈರ್ಯ ತುಂಬಿದರು.
ಈ ಕುರಿತು ಮಾತನಾಡಿದ ಅವರು, ರಕ್ಷಣೆಯ ಹೊಣೆ ಹೊತ್ತ ಪೊಲೀಸ್ ಠಾಣೆಯಲ್ಲಿಯೇ ಹಲ್ಲೆಯಾಗುವುದೆಂದರೆ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದನ್ನು ಬೊಟ್ಟು ಮಾಡುತ್ತಿದೆ. ಕರಾವಳಿ ಪ್ರದೇಶದಲ್ಲಿ ಗಲಭೆ ನಡೆಸಲು ಸರಕಾರವೇ ಕುಮ್ಮಕ್ಕು ನೀಡುತ್ತಿದೆ.
ಆರಕ್ಷಕರನ್ನು ನಿಯಂತ್ರಿಸಿ ಇಡುವ ಸರಕಾರದ ಪ್ರಯತ್ನ ಜಿಲ್ಲೆಯಲ್ಲಿ ಮತ್ತಷ್ಟು ಗಲಭೆ ನಡೆಯಲು ಸಂಚು ರೂಪಿಸಿದಂತಿದೆ. ಚುನಾವಣೆಯ ಹೊಸ್ತಿಲಲ್ಲಿ ಕೋಮು ಗಲಭೆ ಎಬ್ಬಿಸಿ ಅದರ ಉಪಯೋಗ ಪಡೆಯಲು ಕಾಂಗ್ರೆಸ್ ಹವಣಿಸುತ್ತಿರುವುದು ಇದರಿಂದ ಬಯಲಾಗಿದೆ. ಹಲ್ಲೆಕೋರರನ್ನು ಹೆಡೆಮುರಿ ಕಟ್ಟಿ ಕಾನೂನು ಕ್ರಮ ಜರುಗಿಸದೆ ಹೋದರೆ ಸರಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವಮೋರ್ಚಾ ಮಂಗಳೂರು ಮಂಡಲ‌ ಅಧ್ಯಕ್ಷ ಮುರಳಿ ಕೊಣಾಜೆ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು