5:56 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಿಒಡಿಪಿ ಸಮಾಜ ಸೇವಾ ಸಂಸ್ಥೆಯಲ್ಲಿ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು

18/10/2024, 14:14

ಮಂಗಳೂರು(reporterkarnataka.com): ಮೈಕಲ್ ಡಿ ಸೋಜ ಮತ್ತು ಕುಟುಂಬದವರಿಂದ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಕ್ಷಣ ನೆರವು ಕಾರ್ಯಕ್ರಮವನ್ನು ಸಿಒಡಿಪಿಯ ಮದರ್ ಥೆರೆಸಾ ಸಭಾಂಗಣದಲ್ಲಿ ಅಕ್ಟೋಬರ್17ರಂದು ಆಯೋಜಿಸಲಾಯಿತು.
ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.ವಂ.ಪೀಟರ್ ಪೌಲ್ ಸಲ್ಡಾನ್ಹ ವಹಿಸಿ, ಸಾಂಕೇತಿಕವಾಗಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಬಡ್ಡಿರಹಿತ ಸಾಲರೂಪದ ನೆರವನ್ನು ಹಸ್ತಾಂತರಿಸಿ ಈ ಕಾರ್ಯಕ್ರಮಕ್ಕೆ ಶುಭ ನುಡಿದರು.
ಮೈಕಲ್ ಡಿಸೋಜ ರವರು ಹೆತ್ತವರ ಬಗ್ಗೆ ಕಾಳಜಿ ವಹಿಸಿ, ಸಮಾಜದಲ್ಲಿ ಉತ್ತಮ ನಡವಳಿಕೆ ಮತ್ತು ಶಿಕ್ಷಣ ಪಡೆದು, ತಮ್ಮ ಮಾತೃಭಾಷೆಗೆ ಪ್ರಾಮುಖ್ಯತೆ ಕೊಡಬೇಕು ಹಾಗೂ ಹಿರಿಯರು ನಮಗೆ ಮಾಡಿದ ಸಹಾಯವನ್ನು ಎಂದಿಗೂ ಮರೆಯಬಾರದು. ವಿದ್ಯಾಭ್ಯಾಸ ಮುಗಿದ ನಂತರ, ಹೆತ್ತವರನ್ನು ಚೆನ್ನಾಗಿ ನೋಡುವ ಜವಬ್ದಾರಿ ವಹಿಸಿ ಮತ್ತು ತಮ್ಮಿಂದ ಬಡವರಿಗೆ ಸಹಾಯ ಮಾಡುವ ಆಸಕ್ತಿ ಇರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಅವರ ಧರ್ಮಪತ್ನಿ ಫ್ಲಾವಿಯ ಡಿ ಸೋಜ, ಸಿಒಡಿಪಿ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ| ವಿನ್ಸೆಂಟ್ ಡಿ ಸೋಜ ಮತ್ತು ಸಹ ನಿರ್ದೇಶಕ ವಂದನೀಯ ಫಾ| ಲೊರೆನ್ಸ್ ಕುಟಿನ್ಹಾ ಅವರು ಹಾಜರಿದ್ದರು.
ಸಿಒಡಿಪಿ ನಿರ್ದೇಶಕರಾದ ರೆ.ಫಾ. ವಿನ್ಸೆಂಟ್ ಡಿ ಸೋಜ ಶಿಕ್ಷಣ ನಿಧಿಯ ಪ್ರತಿಷ್ಠಾಪಕ ದಾನಿಗಳಾದ ಮೈಕಲ್ ಡಿ ಸೋಜ ಮತ್ತು ಫ್ಲಾವಿಯ ಡಿಸೋಜ ರವರ ಪರಿಚಯ ನೀಡಿದರು. ಬಿಷಪ್‌ರವರು ಅವರಿಗೆ ಗೌರವ ಅರ್ಪಣೆ ಸಲ್ಲಿಸಿದರು.
ಕುಟುಂಬದ ಪರವಾಗಿ ಮಂಗಳೂರು ಧರ್ಮಪ್ರಾಂತ್ಯದ 103 ವಿದ್ಯಾರ್ಥಿಗಳಿಗೆ ರೂ. 86,60,000/- ಬಡ್ಡಿ ರಹಿತ ಸಾಲವನ್ನು ಬ್ಯಾಂಕಿನ ಮುಖಾಂತ್ರ ವಿತರಿಸಲಾಗುವುದು.
ವಂದನೀಯ ಫಾ| ಲೊರೆನ್ಸ್ ಕುಟಿನ್ಹಾರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು