7:27 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ರಕ್ತದ ಮಡುವಿನಲ್ಲಿ ಪತ್ತೆಯಾದ ವ್ಯಕ್ತಿ ಸಾವು: ಘಟನಾ ಸ್ಥಳದಲ್ಲಿ ನಿಂಬೆಹಣ್ಣು,ಎಲೆ ಅಡಿಕೆ ಪತ್ತೆ; ವಾಮಾಚಾರಕ್ಕಾಗಿ ಕೊಲೆ ಶಂಕೆ

18/10/2024, 17:45

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಕ್ತದ ಮಡುವಿನಲ್ಲಿ ಕತ್ತು ಕುಯ್ದ ವ್ಯಕ್ತಿಯೊಬ್ಬರು ನರಳಾಡುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ವ್ಯಕ್ತಿಯನ್ನ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ನಿನ್ನೆ ಹುಣ್ಣಿಮೆ ಹಿನ್ನಲೆ ವಾಮಾಚಾರ ನಡೆಸಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇದರ ಕುರುಹುವಾಗಿ ಸ್ಥಳದಲ್ಲಿ ಮಂತ್ರಿಸಿರುವ ನಿಂಬೆಹಣ್ಣು,101 ರೂ. ನಗದು, ಎಲೆ ಅಡಿಕೆ ಕಂಡುಬಂದಿದೆ.
ಮಲ್ಕುಂಡಿ ಗ್ರಾಮದ ಸದಾಶಿವ(43) ಮೃತ ದುರ್ದೈವಿ.


ಮಡುವಿನಹಳ್ಳಿ ಗ್ರಾಮದ ಪ್ರೌಢ ಶಾಲೆಯ ಸಮೀಪ ನೀರು ಹರಿಯುವ ಹಳ್ಳದಲ್ಲಿ ವಾಮಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕತ್ತು ಕೊಯ್ದು ರಕ್ತದ ಮಡುವಿನಲ್ಲಿ ಬಿದ್ದು ನರಳಾಡುತ್ತಿದ್ದ ದೃಶ್ಯ ಸ್ಥಳೀಯರೊಬ್ಬರ ಕಣ್ಣಿಗೆ ಬಿದ್ದಿದೆ. ನಂತರ ಸ್ಥಳೀಯರ ಮಾಹಿತಿ ಮೇರೆಗೆ ಹುಲ್ಲಹಳ್ಳಿ ಠಾಣೆ .ಪಿಎಸ್ಸೈ ಚೇತನ್ ಕುಮಾರ್ ತಮ್ಮ ಸಿಬ್ಬಂದಿಗಳ ಜೊತೆ ಸ್ಥಳಕ್ಕೆ ಆಗಮಿಸಿ ನರಳಾಡುತ್ತಿದ್ದ ಸದಾಶಿವ ನನ್ನು ಆಸ್ಪತ್ರೆಗೆ ಸಾಗಿಸುವಾಗ
ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಮೈಸೂರು ಜಿಲ್ಲಾ ಎಸ್ಪಿ ವಿಷ್ಣುವರ್ಧನ ಹಾಗೂ ನಂಜನಗೂಡು ಡಿವೈಎಸ್ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು