2:53 PM Monday15 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

21/10/2024, 23:32

ಮಂಗಳೂರು(reporterkarnataka.com): ಮಂಗಳೂರು-ಕೇರಳ ಮಾರ್ಗವಾದ ಉಳ್ಳಾಲದ ತೊಕ್ಕೊಟ್ಟು ರೈಲ್ವೆ ಓವರ್‌ ಬ್ರಿಡ್ಜ್‌ ಹಳಿ ಮೇಲೆ ಕಲ್ಲುಗಳನ್ನು ಇಟ್ಟು ಅಪಾಯಕಾರಿ ಕೃತ್ಯವೆಸಗಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸರು ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಆಗ್ರಹಿಸಿದ್ದಾರೆ.
ಮಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು, ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟು ವಿಕೃತಿ ಮೆರೆದಿರುವ ಈ ಕೃತ್ಯದ ಬಗ್ಗೆ ಈಗಾಗಲೇ ನಾನು ಸಂಬಂಧಪಟ್ಟ ಪೊಲೀಸರು ಹಾಗೂ ರೈಲ್ವೆ ಇಲಾಖೆ ರಕ್ಷಣಾ ಪಡೆ(RPF) ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಈ ರೀತಿಯ ಘಟನೆ ನಡೆಯುತ್ತಿದೆ. ರೈಲ್ವೆ ಇಲಾಖೆಗೆ ಸೇರಿದ ನಮ್ಮ ರಾಷ್ಟ್ರೀಯ ಸಂಪತ್ತಿನ ಮೇಲೆ ಈ ರೀತಿ ದಾಳಿ ಮಾಡಿ ಅದನ್ನು ಹಾನಿಗೊಳಿಸುವುದಕ್ಕೆ ಪ್ರಯತ್ನಿಸಿರುವುದು ದೇಶದ್ರೋಹದ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕರು ಕೂಡ ನಮ್ಮ ರಾಷ್ಟ್ರೀಯ ಸಂಪತ್ತುಗಳನ್ನು ನಮ್ಮ ಸೊತ್ತು ಎನ್ನುವ ರೀತಿಯಲ್ಲಿ ರಕ್ಷಿಸುವ ಕೆಲಸವನ್ನು ಮಾಡಬೇಕು. ಜತೆಗೆ, ಸಮಾಜದಲ್ಲಿ ಈ ರೀತಿಯ ಮಾನಸಿಕತೆ ಹೊಂದಿರುವ ವ್ಯಕ್ತಿಗಳು ಯಾರಿದ್ದಾರೆಯೋ ಅಂಥಹ ದೇಶದ್ರೋಹಿಗಳನ್ನು ಗುರುತಿಸುವ ಕೆಲಸವನ್ನು ಜನತೆ ಕೂಡ ಮಾಡಬೇಕೆಂದು ಕ್ಯಾ. ಚೌಟ ಅವರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು