1:15 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಿ.ಪಿ. ಯೋಗೀಶ್ವರ್ ಬಿಜೆಪಿಗೆ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ; ಎನ್ ಡಿಎ ಮೈತ್ರಿಕೂಟಕ್ಕೆ ಭಾರೀ ಹೊಡೆತ

23/10/2024, 16:25

ಮೃದುಲಾ ನಾಯರ್ ಬೆಂಗಳೂರು

info.reporterkarnataka@gmail.com

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸೈನಿಕ ಖ್ಯಾತಿಯ ಸಿ.ಪಿ. ಯೋಗೀಶ್ವರ್ ಪಕ್ಷ ತೊರೆದು ಇಂದು ಕಾಂಗ್ರೆಸ್ ಸೇರಿದ್ದಾರೆ. ಇದರೊಂದಿಗೆ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ದೊಡ್ಡ ಬಿದ್ದಿದೆ.ಸಿ. ಪಿ. ಯೋಗೇಶ್ವರ್ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ನಂತರ ಇಬ್ಬರು ಒಟ್ಟಿಗೆ ಒಂದೇ ಕಾರಿನಲ್ಲಿ ತೆರಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಿದರು. ನಂತರ
ಯೋಗೇಶ್ವರ್ ಅವರು ಡಿಕೆಶಿ ಅವರ ಜತೆ ಕೆಪಿಸಿಸಿ ಕಚೇರಿಗೆ ತೆರಳಿ ಅಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಡಿ. ಕೆ. ಶಿವಕುಮಾರ್ ಅವರು ಯೋಗೀಶ್ವರ್ ಅವರಿಗೆ ಕಾಂಗ್ರೆಸ್ ಧ್ವಜ ನೀಡಿ ಬರಮಾಡಿಕೊಂಡರು. ಯೋಗೀಶ್ವರ್ ಅವರು ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ವಿಜಯೇಂದ್ರ ಅವರಿಗೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೀಶ್ವರ್ ಅವರು ಗುರುವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ.

ಇತ್ತೀಚಿನ ಸುದ್ದಿ

ಜಾಹೀರಾತು