5:55 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆ: ನಾಳೆ ಮತ ಎಣಿಕೆ; ಬೆಳಗ್ಗೆ 8ರಿಂದ ಕೌಂಟಿಂಗ್ ಶುರು

23/10/2024, 18:22

ಮಂಗಳೂರು(reporterkarnataka.com): ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ಉಪ ಚುನಾವಣೆಯ ಮತಗಳ ಎಣಿಕೆ ಗುರುವಾರ ನಡೆಯಲಿದ್ದು, ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ.
ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು 12 ಮೇಜುಗಳಲ್ಲಿ ಎಣಿಕೆ ನಡೆಯಲಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು “ಡಿ” ಗ್ರೂಪ್ ಸಿಬ್ಬಂದಿ ಇರಲಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ ಗೆ 33 ರಂತೆ ಮತಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗುತ್ತದೆ.
ಮೊದಲು ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ.
ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುವುದು. ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು