7:18 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಒತ್ತುವರಿ ತೆರವು ಮಾಡಿದ್ದ ಜಮೀನುಗಳಲ್ಲಿ ಸಸಿಗಳನ್ನು ನೆಡುವುದಕ್ಕೆ ಮುಂದಾದ ಅರಣ್ಯ ಇಲಾಖೆ: ರೈತರ ಆಕ್ರೋಶ; ತಳ್ಳಾಟ, ಪ್ರಜ್ಞೆ ತಪ್ಪಿದ ಮಹಿಳೆ

24/10/2024, 23:54

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಅರಣ್ಯ ಇಲಾಖೆ ಅರಣ್ಯ ಭೂಮಿಯೆಂದು 2023ರಲ್ಲಿ ಒತ್ತುವರಿ ತೆರವು ಮಾಡಿದ್ದು ತೆರವು ಮಾಡಿದ್ದ ಜಮೀನುಗಳಲ್ಲಿ ಸಸಿಗಳನ್ನು ನೆಡುವುದಕ್ಕೆ ಅರಣ್ಯ ಇಲಾಖೆ ಮುಂದಾಗಿದ್ದ ಕ್ರಮದ ವಿರುದ್ಧ ತಾಲ್ಲೂಕಿನ ಕೋಟಬಲ್ಲಪಲ್ಲಿ ಗ್ರಾಮದ ಬಳಿ ರೈತರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿ ಇದು ನಮ್ಮ ಭೂಮಿ, ಸಸಿಗಳನ್ನು ನೆಡಬೇಡಿ ಎಂದು ಅರಣ್ಯ ಇಲಾಖೆ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಇದೇ ಸಂದರ್ಭದಲ್ಲಿ ರೈತರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ನೂಕಾಟ ತಲ್ಲಾಟ ನಡೆಯಿತು. ನೂಕಾಟ ತಲ್ಲಾಟದ ವೇಳೆ ಮಹಿಳೆಯೋರ್ವಳು ಪ್ರಜ್ಞೆತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.
ಅಕ್ಟೋಬರ್ 22 ರಂದು ಕೋಟಬಲ್ಲಪಲ್ಲಿ ಗ್ರಾಮಕ್ಕೆ ಡಿ ವೈ ಎಸ್ ಪಿ ನಂದಕುಮಾರ್ ರೈತ ಮುಖಂಡರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ 23 ರಂದು ತಾಲ್ಲೂಕು ಕಚೇರಿಯಲ್ಲಿ ಅರಣ್ಯ ಇಲಾಖೆ ಹಾಗೂ ರೈತರು ರೈತ ಮುಖಂಡರು ಸಮ್ಮುಖದಲ್ಲಿ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದು ಅದೇ ರೀತಿಯಾಗಿ ಬುಧವಾರ ನಿಗದಿಯಾಗಿದ್ದ ಸಭೆಯಲ್ಲಿ ರೈತ ಮುಖಂಡರು,ಅರಣ್ಯ ಇಲಾಖೆ ಅಧಿಕಾರಿಗಳು, ತಾಲೂಕು ದಂಡಾಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದು ಸಭೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ರೈತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿ ಸಭೆ ಮದ್ಯೆ ರೈತ ಮುಖಂಡರು ಹೊರಗೆ ಬಂದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.
ಇದೇ ಸಂದರ್ಭದಲ್ಲಿ ರೈತ ಮುಖಂಡ ಪಾತಕೋಟೆ ನವೀನ್ ಕುಮಾರ್ ಮಾತನಾಡಿ ಈ ಸಭೆ ಕೇವಲ ರೈತರನ್ನು ದಿಕ್ಕು ತಪ್ಪಿಸಲು ಹಾಗೂ ರೈತರ ಮುಖಂಡರನ್ನು ದಾರಿ ತಪ್ಪಿಸುವಂತಹ ನಿಟ್ಟಿನಲ್ಲಿ ಬೇಕಾದಂತಹ ಮಾಹಿತಿ ಇಟ್ಟುಕೊಂಡು ಸಭೆಗೆ ಅಧಿಕಾರಿಗಳು ಬಂದಿದ್ದಾರೆ. ಸಭೆಗೆ ಬಂದಿರುವಂತಹ ತಾಲ್ಲೂಕು ಅರಣ್ಯ ಇಲಾಖೆ ಅಧಿಕಾರಿಗಳು ಕೇವಲ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳ ಆದೇಶವನ್ನು ಪಾಲನೆ ಮಾಡಲು ಬಂದಿದ್ದಾರೆ,ಹೊರತು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರ ಮನಸ್ಸು ಗೆದ್ದು ರೈತರಿಗೆ ನ್ಯಾಯ ದೊರಕಿಸಿಕೊಡಲು ಅಧಿಕಾರಿಗಳು ಬಂದಿಲ್ಲಾ, ತಾಲೂಕು ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ಮಾಹಿತಿ ಕೊರತೆ ಇದೆ ಯಾವುದೇ ಕಾರಣಕ್ಕೂ ನಾವು ಕಾರ್ಯಾಚರಣೆಯನ್ನು ನಿಲ್ಲಿಸುವುದಿಲ್ಲ. ನಾವು ಕಾರ್ಯಾಚರಣೆಯನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದಂತಹ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ದಂಡಾಧಿಕಾರಿಗಳು ಅಸಹಾಯಕರಂತೆ ಕೂತಿದ್ದರೆ ಹೊರತು ರೈತರಿಗೆ ನ್ಯಾಯ ದೊರಕಿಸಿ ಕೊಡುವಂತಹ ಕೆಲಸವಾಗಲಿಲ್ಲವೆಂದು ಆಕ್ರೋಶ ಹೊರ ಹಾಕಿ ಕಾನೂನಾತ್ಮಕವಾಗಿ ಅಧಿಕಾರಿಗಳ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ಸಹ ನೀಡಿದರು.
ಮತ್ತೋರ್ವ ರೈತ ಮುಖಂಡ ಸಿಪಿಎಂ ಗೋಪಾಲ್ ಮಾತನಾಡಿ ಸಭೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕಾನೂನು ಅಡಿಯಲ್ಲಿ ಮಾತನಾಡದೆ ಕಾನೂನು ವಿರುದ್ಧವಾಗಿ ಮಾತನಾಡಿದ್ದಾರೆ. ಕಾನೂನು ಉಲ್ಲಂಘನೆ ಮಾಡಿರುವಂತಹ ದಾಖಲೆಗಳನ್ನು ತೋರಿಸಿದರು ಸಹ ಉಡಾಫೆ ಉತ್ತರ ನೀಡುತ್ತಿದ್ದಾರೆ,ಕಾನೂನಾತ್ಮಕವಾಗಿ ಅರಣ್ಯ ಇಲಾಖೆ ವಿರುದ್ಧ ಹೋರಾಟ ಮುಂದುವರಿಸುತ್ತೇವೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ರವರು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳು 2500 ಎಕರೆ ಒತ್ತುವರಿ ತೆರವುಗೊಳಿಸಿದ್ದಾರೆ. 5 ಸಾವಿರ ಕೋಟಿ ಬೆಲೆ ಬಾಳುವ ಆಸ್ತಿಯೆಂದು ಹೇಳುತ್ತಾರೆ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಬೇಕು ಎಂದು ಹೇಳುತ್ತಾರೆ. ರೈತರ ಮೇಲೆ ದೌರ್ಜನ್ಯ ದಬ್ಬಾಳಿಕೆ ಮಾಡಿದರೆ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಬೇಕೆ 2500 ಎಕರೆಯಲ್ಲಿ ಕೇವಲ 1 ಸಾವಿರ ಎಕರೆ ಎಲ್ಲಿ ಒತ್ತುವರಿ ತೆರವು ಮಾಡಿದ್ದೀರಾ ತೋರಿಸಿ ಎಂದು ಸಹ ಪ್ರಶ್ನೆಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರಾದ ಗೋಪಾಲ್, ದಿಂಬಾಲ ಅಶೋಕ್ , ಬಿ.ಎಂ.ಪ್ರಕಾಶ್, ಪಾತಕೋಟೆ ನವೀನ್ ಕುಮಾರ್ , ಸೂರ್ಯನಾರಾಯಣ, ಎಸ್.ಎ. ಸೈಯದ್ ಫಾರೂಕ್, ಇಂಜಿನಿಯರ್. ನಾರಾಯಣಸ್ವಾಮಿ, ಉಪ್ಪರಪಲ್ಲಿ ಚಲಪತಿ, ಗುಲ್ಜಹಾರ್, ಹಾಗೂ ಹಲವು ರೈತರು ಸಹ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು