5:52 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಅ. 27: ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ; ಸಂಜೆ ಬಹಿರಂಗ ಸಭೆ

25/10/2024, 10:59

ಮಂಗಳೂರು(reporterkarnataka.com): ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮ್ಮೇಳನ ಅಕ್ಟೋಬರ್ 27 ರಂದು ನಗರದ ಕೊಟ್ಟಾರ ಚೌಕಿಯ ವಿ.ಎಸ್.ಕೆ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಸಿಪಿಎಂ ಪಕ್ಷದ 24ನೇ ಅಖಿಲ ಭಾರತ ಮಹಾ ಅಧಿವೇಶನ 2025 ಎಪ್ರಿಲ್ ನಲ್ಲಿ ಮಧುರೈ ನಲ್ಲಿ ಆರು ದಿನಗಳ ಕಾಲ ನಡೆಯಲಿದೆ. ಅದರ ಪೂರ್ವ ಭಾವಿಯಾಗಿ ಎಲ್ಲ ಹಂತಗಳ ಸಮ್ಮೇಳನಗಳು ದೇಶಾದ್ಯಂತ ಆರಂಭಗೊಂಡಿವೆ. ದ.ಕ. ಜಿಲ್ಲೆಯಲ್ಲಿಯೂ ಸಮ್ಮೇಳನದ ಪ್ರಕ್ರಿಯೆಗಳು ಆರಂಭಗೊಂಡಿದೆ. ಮಂಗಳೂರು ನಗರ ದಕ್ಷಿಣ ಸಮ್ಮೇಳನವು ಉರ್ವಸ್ಟೋರಿನಲ್ಲಿ ಕಾಮ್ರೇಡ್ ಸೀತಾರಾಮ್ ಯೆಚೂರಿ ವೇದಿಕೆ, ಕಾಮ್ರೇಡ್ ಕೊರಗಪ್ಪ ಶೆಟ್ಟಿ ಸಭಾಂಗಣ ಹಾಗೂ ಕಾಂ ಜೆರಿ ಪತ್ರಾವೋ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಕ್ಟೋಬರ್ 27 ರಂದು ಬೆಳಿಗ್ಗೆ 9:30ಕ್ಕೆ ಧ್ವಜಾರೋಹಣದೊಂದಿಗೆ ಸಮ್ಮೇಳನಕ್ಕೆ ಚಾಲನೆ ದೊರೆಯಲಿದೆ. ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕೆ ಯಾದವ ಶೆಟ್ಟಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರುಗಳಾದ ಜೆ ಬಾಲಕೃಷ್ಣಶೆಟ್ಟಿ, ಪದ್ಮಾವತಿ ಶೆಟ್ಟಿ, ಸುನೀಲ್ ಕುಮಾರ್ ಬಜಾಲ್ ಮಾರ್ಗದರ್ಶಕರಾಗಿ ಉಪಸ್ಥಿತರಿರುತ್ತಾರೆ. ಆ ನಂತರ ಸಮ್ಮೇಳನದ ಪ್ರತಿನಿಧಿ ಕಲಾಪಗಳು ನಡೆಯಲಿವೆ .ಅದೇ ದಿನ ಸಂಜೆ 4 ಗಂಟೆಗೆ ಸಭಾಂಗಣದ ವಠಾರದಿಂದ ಉರ್ವಸ್ಟೋರ್ ಜಂಕ್ಷನ್ ವರೆಗೆ ಆಕರ್ಷಕ ಮೆರವಣೆಗೆ ಹಾಗೂ ಕಾಂ ಚಂದು ಭಂಡಾರಿ ವೇದಿಕೆ, ಕಾಂ ಸುಂದರ ಸಾಲ್ಯಾನ್ ನಗರದಲ್ಲಿ ಬಹಿರಂಗ ಸಭೆ ನಡೆಯಲಿದೆ. ಈ ಬಹಿರಂಗ ಸಭೆಗೆ ಪ್ರಮುಖ ಭಾಷಣಗಾರರಾಗಿ ಸಿಪಿಐಎಂ ಪಕ್ಷದ ಕರ್ನಾಟಕ ರಾಜ್ಯ ಮುಖಂಡರಾದ ಕೆ ಮಹಾಂತೇಶ್ ಭಾಗವಹಿಸಲಿದ್ದಾರೆ ಎಂದು ಸಿಪಿಐಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು