1:45 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಸರಪಾಡಿ: ಪಟ್ಲ ಯಕ್ಷಾಶ್ರಯ ಯೋಜನೆಯ 31ನೇ ಮನೆಯ ಕೀಲಿಕೈ ಚೆಂಡೆ ವಾದಕರಾದ ಚಂದ್ರಶೇಖರರಿಗೆ ಹಸ್ತಾಂತರ

25/10/2024, 18:57

ಬಂಟ್ವಾಳ(reporterkarnataka.com): ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿ ಅವರ ಕನಸಿನ ಪಟ್ಲ ಯಕ್ಷಾಶ್ರಯ ಯೋಜನೆಯಡಿ ಸರಪಾಡಿಯಲ್ಲಿ ನಿರ್ಮಿಸಿದ 31ನೇ ಮನೆಯ ಕೀಲಿಕೈಯನ್ನು ಫಲಾನುಭವಿಗಳಾದ ಶ್ರೀ ಧರ್ಮಸ್ಥಳದ ಮೇಳದ ಚೆಂಡೆ ವಾದಕರಾದ ಚಂದ್ರಶೇಖರ ಅವರಿಗೆ ಹಸ್ತಾಂತರಿಸಲಾಯಿತು.


ಖ್ಯಾತ ಉದ್ಯಮಿ ರಘುನಾಥ ಸೋಮಯಾಜಿಯವರ ಕೊಡುಗೆಯ ಈ ಮನೆಯ ಹಸ್ತಾಂತರ ಕಾರ್ಯಕ್ರಮದಲ್ಲಿ ಕಲಾಪೋಷಕರಾದ ಆರ್. ಕೆ. ಭಟ್ ಬೆಂಗಳೂರು, ಟ್ರಸ್ಟಿನ ಕೇಂದ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕೆ. ಭಂಡಾರಿ, ಟ್ರಸ್ಟಿನ ಸರಪಾಡಿ ಘಟಕದ ಸಂಚಾಲಕರಾದ ಸರಪಾಡಿ ಅಶೋಕ್ ಶೆಟ್ಟಿ, ಬಂಟ್ವಾಳ ಘಟಕದ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ರಂಗೋಲಿ, ಗೌರವಾಧ್ಯಕ್ಷರಾದ ಜಗನ್ನಾಥ ಚೌಟ, ಶ್ರೀಕಾಂತ್ ಅರಳ ಇನ್ನಿತರರು ಭಾಗವಹಿಸಿದರು. ಸರಪಾಡಿ ಘಟಕದ ಕಾರ್ಯದರ್ಶಿಗಳಾದ ಧನಂಜಯ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು