8:13 AM Sunday27 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಯುವಕನಿಂದ ಅಶ್ಲೀಲ, ಬೆದರಿಕೆ ಮೆಸೇಜ್ ಗೆ ಭಯಗೊಂಡು ಯುವತಿ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

26/10/2024, 13:08

ಮಂಗಳೂರು(reporterkarnataka.com): ಸುರತ್ಕಲ್ ಸಮೀಪದ ಮದ್ಯ ಗ್ರಾಮದ ಯುವತಿಯೊಬ್ಬಳು ಯುವಕನೊಬ್ಬನ ಅಶ್ಲೀಲ ಬೆದರಿಕೆ ಸಂದೇಶಗಳಿಗೆ ಭಯಗೊಂಢು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ.
ಯುವತಿ ತನ್ನ ಫೇಸ್‌ಬುಕ್ ಖಾತೆ ಹ್ಯಾಕ್ ಆಗಿರುವ ಬಗ್ಗೆ ಅಕ್ಟೋಬರ್ 22 ರಂದು ಸುರತ್ಕಲ್ ಪೊಲೀಸರಿಗೆ ದೂರು ನೀಡಿದ್ದರು. ಇಡ್ಯಾ ಗ್ರಾಮದ ಶಾರೀಕ್ ಎಂಬಾತನ ಖಾತೆಯಿಂದ ತನ್ನ ಸಹೋದರ ಕಿಶನ್ ಮತ್ತು ಆತನ ಸ್ನೇಹಿತ ಹರ್ಷಿತ್‌ಗೆ ಅಶ್ಲೀಲ ಮತ್ತು ಬೆದರಿಕೆ ಸಂದೇಶಗಳನ್ನು ಕಳುಹಿಸಲಾಗಿದೆ ಎಂದು ದೂರಿದ್ದಳು. ದೂರನ್ನು ಸ್ವೀಕರಿಸಿದ ಸುರತ್ಕಲ್ ಪೊಲೀಸರು ಶಾರಿಕ್‌ನನ್ನು ವಿಚಾರಣೆಗಾಗಿ ಕರೆದಿದ್ದು, ಆತನ ಮೊಬೈಲ್ ಫೋನ್ ಮತ್ತು ಸಾಮಾಜಿಕ ಮಾಧ್ಯಮ ಚಟುವಟಿಕೆಯನ್ನು ಪರಿಶೀಲಿಸಿದ್ದರು.
ಇದೀಗ ಸುರತ್ಕಲ್‌ ಪೊಲೀಸರು ಆರೋಪಿ ಇಡ್ಯಾ ಗ್ರಾಮದ ಶಾರೀಕ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆದರೆ,
ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಅದರಲ್ಲಿ ಯಾವುದೇ ಪೂರಕ ಮಾಹಿತಿ ಸಿಕ್ಕಿರಲಿಲ್ಲ. ಅಕ್ಟೋಬರ್ 24 ರಂದು ಯುವತಿಗೆ ಮತ್ತೊಂದು ಬೆದರಿಕೆ ಸಂದೇಶ ಕಳುಹಿಸಿದ್ದು, ಪ್ರಕರಣ ತೀವ್ರ ಸ್ವರೂಪ ಪಡೆದಿದೆ. ಆಕೆಯ ಮಾನಸಿಕ ಯೋಗಕ್ಷೇಮದ ಮೇಲೆ ಪರಿಣಾಮ ಬೀರಿದೆ. ಶಾರಿಕ್ ಮತ್ತು ಅವನ ತಾಯಿ ನೂರ್ ಜಹಾನ್ ತನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್‌ನೋಟ್ ಬರೆದಿಟ್ಟು ಅಕ್ಟೋಬರ್ 25 ರಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಕೆಯನ್ನು ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾರಿಕ್‌ನ ನಿರಂತರ ಕಿರುಕುಳದ ಬಗ್ಗೆ ಯುವತಿಯ ಹೇಳಿಕೆಯ ಮೇರೆಗೆ ಸುರತ್ಕಲ್ ಪೊಲೀಸರು ಮತ್ತೊಂದು ಪ್ರಕರಣವನ್ನು ದಾಖಲಿಸಿ ಶಾರಿಕ್ ನನ್ನು ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು