10:44 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ಗೆ ಐಜ್ವಾಲ್‌ ಧರ್ಮಾಧ್ಯಕ್ಸರ ಭೇಟಿ

27/10/2024, 18:33

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಜಾ ಚರ್ಚ್‌ ಗೆ ಉತ್ತರ ಭಾರತದ ಐಜ್ವಾಲ್‌ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಡಾ. ಜೋಕಿಂ ವಾಲ್ಡರ್‌ ಅವರು ಅತಿಥಿಯಾಗಿ ಆಗಮಿಸಿ ಇಂದು ಬೆಳಗ್ಗಿನ ಬಲಿ ಪೂಜೆಯ ನೇತೃತ್ವ ವಹಿಸಿದ್ದರು.
ಅವರು ತಮ್ಮ ಪ್ರವಚನದಲ್ಲಿ ಬಡ ಬಗ್ಗರ ಬಗ್ಗೆ ನಾವು ಹೆಚ್ಚಿನ ಕಾಳಜಿ ವಹಿಸ ಬೇಕು. ಪ್ರಾರ್ಥನೆ ನಮ್ಮ ಆದ್ಯತೆ ಆಗ ಬೇಕೆಂದರು. ಬಲಿ ಪೂಜೆಯ ಬಳಿಕ ಅವರ ಭೇಟಿಯ ಸವಿ ನೆನಪಿಗಾಗಿ ಅವರನ್ನು ಸನ್ಮಾನಿಸಲಾಯಿತು.
ಬಲಿಪೂಜೆಯಲ್ಲಿ ಶಿವಮೊಗ್ಗ ಧರ್ಮ ಪ್ರಾಂತ್ಯದ ವಂದನೀಯ ರೋಶನ್‌ ಪಿಂಟೊ ಭಾಗಿಯಾಗಿದ್ದರು. ಪಾಲ್ದನೆ ಚರ್ಚಿನ ಪ್ರಧಾನ ಧರ್ಮ ಗುರು ವಂದನೀಯ ಆಲ್ಬನ್‌ ಡಿ’ಸೋಜಾ, ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌, ಕಾರ್ಯದರ್ಶಿ ಆಸ್ಟಿನ್‌ ಮೊಂತೇರೊ, ವಿವಿಧ ಆಯೋಗಗಳ ಸಂಚಾಲಕ ಜೊಸ್ಲಿನ್‌ ಲೋಬೊ, ಲೀಜನ್ ಆಫ್‌ ಮೇರಿ ಸಂಘದ ಅಧ್ಯಕ್ಷೆ ಹೆಲೆನ್‌ ಲೋಬೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು