4:16 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸ್ಕಾಲರ್‌ಶಿಪ್ ಕುರಿತ ಸುಳ್ಳು ಸುದ್ದಿಗೆ ಕಿವಿಗೊಡಬೇಡಿ: ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ

27/10/2024, 23:27

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ರೂ 24,000ಗಳ ಸ್ಕಾಲರ್‌ಶೀಪ್‌ ಸೌಲಭ್ಯವಿರುವ ಕುರಿತಾದ ಸುಳ್ಳು ಸುದ್ದಿಯ ಅಧಿಕೃತ ಸಹಿಯಿಲ್ಲದ ಅರ್ಜಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದನ್ನು ಸಾರ್ವಜನಿಕರು ನಂಬದಿರಿ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷಾ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮೇಲಿನ ಸುದ್ದಿಯು ಸಾರ್ವಜನಿಕರನ್ನು ಗೊಂದಲಕ್ಕೀಡು ಮಾಡಿದ್ದು, ಸಾರ್ವಜನಿಕರು ವಿವಿಧ ಕಛೇರಿಗಳಿಗೆ ಅರ್ಜಿಗಾಗಿ ಅಲೆದಾಡುತ್ತಿರುವುದು ಕಂಡುಬಂದಿರುತ್ತದೆ. ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆಯು ಎಲ್ಲಾ ತಂದೆಯಿಲ್ಲದ ಮಕ್ಕಳಿಗೆ ಅನ್ವಯವಾಗುವುದಿಲ್ಲ. ಈ ಯೋಜನೆಯ ಬಗ್ಗೆ ಸರಿಯಾಗಿ ಅರಿತುಕೊಳ್ಳಬೇಕು. ಯೋಜನೆಯಲ್ಲಿ
ಫಲಾನುಭವಿಯಾಗಲು ನಿರ್ಧಿಷ್ಟ ಮಾನದಂಡಗಳು ಅನ್ವಯವಾಗಲಿವೆ ಎಂದು ತಿಳಿಸಿದ್ದಾರೆ.
ಪ್ರಾಯೋಜಕತ್ವ ಯೋಜನೆಯ ಮಾನದಂಡಗಳಾದ ತಾಯಿ ವಿಧವೆ, ವಿಚ್ಛೇದಿತೆ ಅಥವಾ ಕುಟುಂಬದಿಂದ ಪರಿತ್ಯಜಿಸಲ್ಪಟ್ಟಿದ್ದರೆ, ಮಕ್ಕಳು ಅನಾಥರಾಗಿದ್ದಾರೆ ಹಾಗೂ ವಿಸ್ತ್ರತ ಕುಟುಂಬದೊಡನೆ ಜೀವಿಸುತ್ತಿದ್ದರೆ, ಪೋಷಕರು ಜೀವಕ್ಕೆ ಬೆದರಿಕೆಯೊಡ್ಡುವ, ಗಂಭೀರ ಸ್ವರೂಪದ ಖಾಯಿಲೆಯ ಸಂತ್ರಸ್ಥರಾಗಿದ್ದರೆ, ಪೋಷಕರು ಆಸಕ್ತರಾಗಿದ್ದಾರೆ ಅಥವಾ ಮಕ್ಕಳನ್ನು ನೋಡಿಕೊಳ್ಳಲು ಅರ್ಥಿಕವಾಗಿ ಹಾಗೂ ದೈಹಿಕವಾಗಿ ಅಸಮರ್ಥವಾಗಿದ್ದರೆ.
ಬಾಲನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ 2015ರ ಪ್ರಕಾರ ಮಕ್ಕಳು ಪೋಷಣೆ ಮತ್ತು ರಕ್ಷಣೆಯ ಅಗತ್ಯ ಹೊಂದಿದ್ದರೆ ಅಂದರೆ ವಸತಿರಹಿತರು, ಯಾವುದಾದರು ನೈಸರ್ಗಿಕ ವಿಕೋಪಗಳ ಸಂತ್ರಸ್ಥರು, ಮಾನವ ಕಳ್ಳ ಸಾಗಾಣೆ ಸಂತ್ರಸ್ಥರು, ಹೆಚ್.ಐ.ವಿ/ ಏಡ್ಸ್ ಪರಿಣಾಮ ಪೀಡಿತ ಮಗು, ವಿಶೇಷ ಚೇತನ ಮಗು, ತಪ್ಪಿಸಿಕೊಂಡಿರುವ ಅಥವಾ ಓಡಿಬಂದಿರುವ ಮಗು, ಭಿಕ್ಷಾಟಣೆ ಅಥವಾ ಬೀದಿಯಲ್ಲಿ ವಾಸಿಸುತ್ತಿರುವ ಮಗು, ಬೆಂಬಲ ಹಾಗೂ ಪುನರ್ವಸತಿಯ ಅಗತ್ಯವಿರುವ ಹಿಂಸೆಗೊಳಪಟ್ಟ ಅಥವಾ ನಿಂದನೆ ಅಥವಾ ಶೋಷಿತ ಮಕ್ಕಳ ಅರ್ಜಿ ಸಲ್ಲಿಸಿ ಈ ಯೋಜನೆಯ ಸೌಲಭ್ಯ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು