4:28 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಗ್ರಾಮೀಣ ಜನರ ಸಮಸ್ಯೆ ನಿವಾರಣೆಗೆ ಮಾಧ್ಯಮ ರಂಗದ ನಿರಂತರ ಪ್ರಯತ್ನ ಇತರರಿಗೆ ಮಾದರಿ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

28/10/2024, 19:41

ಮಂಗಳೂರು(reporterkarnataka.com): ಗ್ರಾಮೀಣ ಭಾಗದ ಜನರ ಸಮಸ್ಯೆ ಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ, ನಿವಾರಣೆಗೆ ನಿರಂತರವಾಗಿ ಪ್ರಯತ್ನಿ ಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಅವರು ಇಂದು ನಗರದ ಪತ್ರಿಕಾ ಭವನದಲ್ಲಿ
ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಎಂಸಿಎಫ್ ಸಂಸ್ಥೆಯ ಸಿಎಸ್ ಆರ್ ನಿಧಿಯ ಮೂಲಕ ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಸೋಮವಾರ ಸಮವಸ್ತ್ರ ವಿತರಿಸಿ ಮಾತನಾಡುತ್ತಿದ್ದರು.
ಮಾಧ್ಯಗಳು ಜನರ ಸಮಸ್ಯೆ ಗಳ ಬಗ್ಗೆ ಬೆಳಕು ಚೆಲ್ಲುವುದರ ಜೊತೆ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದ ಜೊತೆ ಅಲ್ಲಿನ ಸ್ಥತ ಜನರ ಜೊತೆ ಸೇರಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಗ್ರಾಮೀಣ ಭಾಗದಲ್ಲಿ ನಡೆಸುತ್ತಿರುವ ಗ್ರಾಮ ವಾಸ್ತವ್ಯದ ಮೂಲಕ ಅವರ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಿ ರುವುದು ಮತ್ತು ಆ ಸಮಸ್ಯೆ ಪರಿಹರಿಸಲು ಗ್ರಾಮದ ಜನರು ಜೊತೆ ಸೇರಿ ಮಾಡುತ್ತಿರುವ ಕೆಲಸ ತಾನು ಇತರ ಕಡೆ ನೋಡಿಲ್ಲ‌. ಇದು ಜಿಲ್ಲೆಯ ಅಭಿವೃದ್ಧಿಗೆ ಪೂರಕ ಎಂದರು.
ಇದೇ ಸಂದರ್ಭದಲ್ಲಿ ಕುತ್ಲೂರು ಗ್ರಾಮದ ಸಾಹಸ ಪ್ರವಾ ಸೋದ್ಯಮ ಸಾಕ್ಷ್ಯ ಚಿತ್ರದ ಮೂಲಕ ಪ್ರಶಸ್ತಿ ಪಡೆದ ಕುತ್ಲೂರು ಗ್ರಾಮದ ಪ್ರತಿನಿಧಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸನ್ಮಾನಿಸಿದರು.
ಸಮಾರಂಭದ ವೇದಿಕೆಯಲ್ಲಿ ಎಂಸಿಎಫ್ ನ ಚೀಫ್ ಪ್ರೊಡಕ್ಷನ್ ಆಫೀಸರ್ ಗಿರೀಶ್ ಎಂಸಿಎಫ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸುತ್ತಾ,ಕುತ್ಲೂರು ಗ್ರಾಮಾಂತರ ಪ್ರದೇಶ ಸೇರಿದಂತೆ ಸಂಸ್ಥೆಯ ಸಿಎಸ್ ಆರ್ ನಿಧಿಯ ವತಿಯಿಂದ ಸುಮಾರು 350 ಮಕ್ಕಳಿಗೆ ಈ ಬಾರಿ ಸಮವಸ್ತ್ರ ನೀಡಲು ಸಂತೋಷ ಪಡುವುದಾಗಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಎಂಸಿಫ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಅವಿನಂದನ್, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ,ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮ
ಚಂದ್ರ ಭಟ್ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್. ಕಾರ್ಯಕ್ರಮ ನಿರೂಪಿಸಿ, ಪ್ರದಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು